2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ 01:45 ಗಂಟೆಯ ವರೆಗೆ ನಡೆಯಲಿದ್ದು ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.
ಎಸ್.ಎಸ್.ಎಲ್.ಸಿ ಪರೀಕ್ಷೆ-01 ಕ್ಕೆ ನಿಗದಿಪಡಿಸಿರುವ ಪರೀಕ್ಷಾ ಕೇಂದ್ರಗಳು ದೇವನಹಳ್ಳಿ ತಾಲ್ಲೂಕಿನಲ್ಲಿ 13, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 14, ಹೊಸಕೋಟೆ ತಾಲ್ಲೂಕಿನಲ್ಲಿ 12, ನೆಲಮಂಗಲ ತಾಲ್ಲೂಕಿನಲ್ಲಿ 13 ಸೇರಿ ಒಟ್ಟು 52 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುತ್ತಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಕ್ಕೆ ನೋಂದಣಿ ವಿವರ ನೋಡುವುದಾದರೆ ಗಂಡು ಮಕ್ಕಳ ಸಂಖ್ಯೆ 7070, ಹೆಣ್ಣು ಮಕ್ಕಳ ಸಂಖ್ಯೆ 7244 ಸೇರಿ ಒಟ್ಟು 14,314 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ.
ಅದರಲ್ಲಿ ಮೊದಲ(ಪ್ರಥಮ) ಬಾರಿ ಪರೀಕ್ಷೆ ಬರೆಯುವವರ ಸಂಖ್ಯೆ 13,418, ಪುನರಾವರ್ತಿತ ಅಭ್ಯರ್ಥಿಗಳು 896 ಮಂದಿ ಪರೀಕ್ಷೆಗೆ ಹಾಜರಾಗಲಿದ್ದಾರೆ.
ಪರೀಕ್ಷೆಗಳು ಪಾರದರ್ಶಕತೆ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಿಂದ ಮತ್ತು ಜಿಲ್ಲಾಡಳಿತದಿಂದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜಿಲ್ಲೆಯ ನಾಲ್ಕು ತಾಲ್ಲೂಕಿನ 52 ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಪರೀಕ್ಷಾ ಕೇಂದ್ರ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಅದರಂತೆ ಇಂದಿನ ಪರೀಕ್ಷೆ ಎದುರಿಸಲು ವಿದ್ಯಾರ್ಥಿಗಳು ನಿಗದಿ ಪರೀಕ್ಷೆ ಕೇಂದ್ರಗಳಿಗೆ ಆಗಮಿಸಿ ನೋಂದಣಿ ಸಂಖ್ಯೆ, ಪರೀಕ್ಷಾ ಕೊಠಡಿ ಹುಡುಕುತ್ತಿರುವ ದೃಶ್ಯ ಕಂಡುಬಂತು.
ಜೊತೆಗೆ ಬಿಇಒ ಅವರು ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದರು. ದೊಡ್ಡಬಳ್ಳಾಪುರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಗುಲಾಬಿ ನೀಡಿ ಸ್ವಾಗತ ಕೋರಿದರು. ನಿರ್ಭೀತಿಯಿಂದ ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…