ಇಂದಿನಿಂದ ಮೂರು ದಿನ (ಜ.6ರಿಂದ 8ರವರೆಗೆ) ರಾಜ್ಯ ಮಟ್ಟದ ಪುರುಷರ ಕಬಡ್ಡಿ ಚಾಂಪಿಯನ್ ಶಿಪ್ ಪಂದ್ಯಾವಳಿ: ಸಕಲ‌ ಸಿದ್ಧತೆ

ಶಾಸಕ ಧೀರಜ್ ಮುನಿರಾಜ್ ಹುಟ್ಟುಹಬ್ಬದ ಪ್ರಯುಕ್ತ, ಕರ್ನಾಟಕ ರಾಜ್ಯ ಅಮೇಚೂರ್ ಕಬಡ್ಡಿ ಅಸೋಸಿಯೇಷನ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಮೇಚೂರ್ ಕಬಡ್ಡಿ ಅಸೋಸಿಯೇಷನ್, ಧೀರಜ್ ಮುನಿರಾಜ್ ಬ್ರಿಗೇಡ್ ಇವರ ಸಂಯುಕ್ತಾಶ್ರಯದಲ್ಲಿ ಅಂಜನಾದ್ರಿ ಕಪ್-2025, ಕರ್ನಾಟಕ ರಾಜ್ಯ ಮಟ್ಟದ ಪುರುಷರ ಕಬಡ್ಡಿ ಚಾಂಪಿಯನ್ ಶಿಪ್ -2025 ಪಂದ್ಯಾವಳಿಯನ್ನು ಇಂದಿನಿಂದ ಅಂದರೆ ಜ.6ರಿಂದ 8ರವರೆಗೆ ತಾಲೂಕಿನ ಖಾಸ್ ಬಾಗ್ ನ ಶ್ರೀ ಆಂಜನೇಯಸ್ವಾಮಿ ದೇವಾಯಲದ ಸಮೀಪದಲ್ಲಿ‌ ಆಯೋಜನೆ ಮಾಡಲಾಗಿದೆ.

ಕಬಡ್ಡಿ ಪಂದ್ಯಾವಳಿಯಲ್ಲಿ ಸುಮಾರು 26 ಜಿಲ್ಲೆಯಗಳ ತಂಡಗಳು ಭಾಗವಹಿಸಲಿವೆ. ಇಂದು ಸಂಜೆ 6ಗಂಟೆಗೆ ಪಂದ್ಯಾವಳಿಗಳು ಪ್ರಾರಂಭವಾಗಲಿವೆ. ಇಂದಿನ ಕಾರ್ಯಕ್ರಮವನ್ನು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಉದ್ಘಾಟಿಸಲಿದ್ದಾರೆ ಎಂದು ಮಧುರೆ ಗ್ರಾಮ ಪಂಚಾಯಿತಿ ಸದಸ್ಯ, ಕಾರ್ಯಕ್ರಮದ ಆಯೋಜನ ಆರ್.ಆನಂದ ಮೂರ್ತಿ ತಿಳಿಸಿದರು.

ಪ್ರಥಮ ಬಹುಮಾನವಾಗಿ 1ಲಕ್ಷದ 101ರೂ. ನೀಡಲಾಗುವುದು. ಪಂದ್ಯಾವಳಿಗೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ…

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

4 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

8 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

8 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

13 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago