ಭಾರತ ಸರ್ಕಾರದ ಶಿಕ್ಷಣ ಸಚಿವಾಲಯ ಮತ್ತು ನ್ಯಾಕ್ ಎ++(NAAC A++) ಮಾನ್ಯತೆ ಪಡೆದ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (IGNOU-ಇಗ್ನೋ)ದ 2023ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ ಮತ್ತು ಪ್ರಮಾಣ ಪತ್ರ ಮಟ್ಟದ ಕಾರ್ಯಕ್ರಮಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಬೆಂಗಳೂರು ಪ್ರಾದೇಶಿಕ ಕೇಂದ್ರದ ಹಿರಿಯ ಪ್ರಾದೇಶಿಕ ನಿರ್ದೇಶಕಿ ಡಾ. ಎಸ್.ರಾಧಾ ಅವರು ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ದೈಹಿಕ ಅಶಕ್ತ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಮತ್ತು ಶುಲ್ಕ ಮರು ಪಾವತಿ ಸೌಲಭ್ಯ ಪಡೆಯಲು ಅವಕಾಶವಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡ (ಎಸ್‌ಸಿ/ಎಸ್ಟಿ) ವಿದ್ಯಾರ್ಥಿಗಳು ಸಾಮಾನ್ಯ ಬಿ.ಕಾಂ, ಬಿ.ಎ. ಮುತ್ತು ಬಿ.ಎಸ್ಸಿ ಗೆ ಅರ್ಜಿ ಸಲ್ಲಿಸುವಾಗ ಪರಿಶಿಷ್ಟ ಜಾತಿ ಉಪಜಾತಿ ಯೋಜನೆ(SCSP) ಮತ್ತು ಬುಡಕಟ್ಟು(TSP) ಅಡಿಯಲ್ಲಿ ಶುಲ್ಕ ವಿನಾಯಿತಿ ಪಡೆಯಬಹುದು.
ಅರ್ಹ ವಿದ್ಯಾರ್ಥಿಗಳು ಭಾರತ ಸರ್ಕಾರದ ವಿದ್ಯಾರ್ಥಿಗ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ವಿದ್ಯಾ ಲಕ್ಷ್ಮಿ ಪೋರ್ಟಲ್ ಮೂಲಕ ಶಿಕ್ಷಣ ಸಾಲ ಸೌಲಭ್ಯವನ್ನು ಸಹ ಪಡೆಯಬಹುದು.
ಜುಲೈನಲ್ಲಿ ನಡೆಯುವ ಪ್ರವೇಶಕ್ಕಾಗಿ ಅನ್‌ಲೈನ್‌ನ ಮೂಲಕ ಅರ್ಜಿ ಸಲ್ಲಿಸಲು https://ignouadmission.samarth.edu.in/ ಲಿಂಕ್ ಕ್ಲಿಕ್ ಮಾಡಿ ಮತ್ತು www.ignou.ac.in ಗೆ ಭೇಟಿ ನೀಡಿ ಸಮಗ್ರ ವಿವರಗಳನ್ನು ಪಡೆಯಬಹುದು.
AICTE ಪರಿಷ್ಕೃತ ನಿಯಮಗಳ ಪ್ರಕಾರ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ ಇಲ್ಲದ ಎಂ.ಬಿಎ ಪದವಿಗೆ ನೇರ ಪ್ರವೇಶ ಒದಗಿಸಲಾಗುವುದು. ಡಿಜಿಟಲ್ ಮಾಧ್ಯಮ, ಎಲೆಕ್ಟ್ರಾನಿಕ್ ಮಾಧ್ಯಮ, ಅಭಿವೃದ್ಧಿ ಪತ್ರಿಕೋದ್ಯಮದ ಅತ್ಯಂತ ಉಪಯುಕ್ತ ಮತ್ತು ಉದ್ಯಮದ ಅಗತ್ಯ ಕಾರ್ಯಕ್ರಮಗಳನ್ನು ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ ಆರಂಭಿಸಿದ್ದು, ವಿದ್ಯಾರ್ಥಿಗಳು ತಮ್ಮ ಅಸಕ್ತಿಗೆ ಅನುಗುಣವಾಗಿ ಆಯ್ಕೆ ಮಾಡಿಕೊಳ್ಳಬಹುದು.
ಅರ್ಹತಾ ಷರತ್ತುಗಳು ಮತ್ತು ಇತರ ವಿವರಗಳಿಗಾಗಿ, ಇ-ಪ್ರಾಸ್ಪೆಕ್ಟಸ್ ಅನ್ನುhttp://www.ignou.ac.in/userfiles/Common-Prospectus-English.pdf ನಲ್ಲಿ ಡೌನ್ಲೋಡ್ ಮಾಡಿ. ಹೆಚ್ಚಿನ ಮಾಹಿತಿಗಾಗಿ 9449337272 ಗೆ Whatsapp SMS ಅಥವಾ 080-29607272 ಗೆ ಕರೆ ಮಾಡಬಹುದು, admissionrc13@ignou.ac.in ಗೆ ಮೇಲ್ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಇಗ್ನೋದ ಹಿರಿಯ ಪ್ರಾದೇಶಿಕ ನಿರ್ದೇಶಕಿ ಡಾ. ಎಸ್.ರಾಧಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…
ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…