ಸ್ಥಗಿತಗೊಂಡಿದ್ದ ಇಂದಿರಾ ಕ್ಯಾಂಟೀನ್ ಪುನರಾರಂಭ ಮಾಡಲು ಚರ್ಚೆ ಮಾಡಿದ್ದೇವೆ. ಅತಿ ಶೀಘ್ರದಲ್ಲಿ ಇಂದಿರಾ ಕ್ಯಾಂಟೀನ್ ನಲ್ಲಿ ಜನರು ಊಟ ಮಾಡುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಆಗಬೇಕು. ಬೆಂಗಳೂರಿನಲ್ಲಿರುವ ಇಂದಿರಾ ಕ್ಯಾಂಟೀನ್ ಗಳ ಖರ್ಚು ವೆಚ್ಚಕ್ಕಾಗಿ ಬಿಬಿಎಂಪಿಯಿಂದ ಶೇ. 70ರಷ್ಟು ಹಾಗೂ ಸರ್ಕಾರ ಶೇ.30ರಷ್ಟು ಅನುದಾನ ಬಿಡುಗಡೆ ಆಗುತ್ತಿತ್ತು. ಈಗ ಶೇ.50/50 ಅನುದಾನ ಬಿಡುಗಡೆ ಮಾಡಬೇಕು ಸೂಚನೆ ನೀಡಲಾಗಿದೆ ಎಂದರು.
ಎಲ್ಲೆಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ತೆಗೆಯಬೇಕು ಎಂಬುದನ್ನು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದೇವೆ.
ಜನರಿಗೆ ನೀಡುವ ಊಟದಲ್ಲಿ ಕ್ವಾಲಿಟಿ ಹಾಗೂ ಕ್ವಾಂಟಿಟಿ ಕಾಪಾಡಬೇಕು ಎಂದು ತಿಳಿಸಲಾಗಿದೆ. ಸದ್ಯ ಮೆನುವಿನಲ್ಲೂ ಬದಲಾವಣೆ ಆಗಲಿದೆ. ಆದರೆ ದರ ಪರಿಷ್ಕರಣೆಯಲ್ಲಿ ಬದಲಾವಣೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ