ಇಂದು ನಾಡಿನೆಲ್ಲೆಡೆ ಶ್ರೀ ರಾಮನವಮಿ ಸಂಭ್ರಮ‌, ಸಡಗರ: ದೇವಾಲಯಗಳಲ್ಲಿ ವಿಶೇಷ ಪೂಜೆ: ಭಕ್ತರಿಗೆ ಪಾನಕ, ಮಜ್ಜಿಗೆ, ಕೋಸಂಬರಿ ವಿತರಣೆ

ಇಂದು ನಾಡಿನೆಲ್ಲೆಡೆ ಶ್ರೀ ರಾಮನವಮಿ ಸಂಭ್ರಮ‌ ಸಡಗರ. ಶ್ರೀ ರಾಮನವಮಿ ಅಂಗವಾಗಿ ಶ್ರೀರಾಮ ಹಾಗೂ ಆಂಜನೇಯ ದೇಗುಲಗಳು ಸೇರಿದಂತೆ ವಿವಿದೆಡೆಗಳಲ್ಲಿ ಭಾನುವಾರ ಸಂಭ್ರಮ, ಸಡಗರ ಹಾಗೂ ಶ್ರದ್ಧ ಭಕ್ತಿಯಿಂದ ಪೂಜೆ ಪುನಸ್ಕಾರಗಳು, ಎಲ್ಲೆಲ್ಲೂ ಶ್ರೀ ರಾಮನಾಮಗಳು ಮೊಳಗಿದವು.

ತಾಲೂಕಿನ ಶ್ರೀರಾಮ ಹಾಗೂ ಆಂಜನೇಯಸ್ವಾಮಿ ದೇವಾಲಯಗಳನ್ನು ವಿವಿಧ ಬಗೆಯ ಹೂಗಳಿಂದ ಅಲಂಕರಿಸಿ, ಮಹಾಮಂಗಳಾರತಿ ಮಾಡಲಾಯಿತು. ದೇವರಿಗೆ ಬೆಳಗ್ಗೆಯಿಂದಲೇ ಅಭಿಷೇಕಗಳು ವಿವಿಧ ಪೂಜೆಗಳನ್ನು ನೆರವೇರಿಸಲಾಯಿತು. ಇಂದು ಮುಂಜಾನೆಯಿಂದಲೇ ಸಹಸ್ರಾರು ಭಕ್ತರು ದೇವಾಲಯಗಳಿಗೆ ಆಗಮಿಸಿ ದೇವರ ದರ್ಶನ ಪಡೆದು, ಪಾನಕ, ಮಜ್ಜಿಗೆ, ಕೋಸಂಬರಿ ತಿಂದು ದೇವರ ಕೃಪೆಗೆ ಪಾತ್ರರಾದರು.

ಗ್ರಾಮೀಣ ಪ್ರದೇಶಗಳಲ್ಲಿರುವ ಶ್ರೀ ರಾಮ ಆಂಜನೇಯ ದೇಗುಲಗಳಿಗೆ ನವಮಿ ಉತ್ಸವ ಅಂಗವಾಗಿ ದೇವಸ್ಥಾನಗಳಿಗೆ ಸುಣ್ಣ ಬಣ್ಣಗಳಿಂದ ಹಾಗೂ ಹೂವು, ತಳಿರು ತೋರಣ, ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ರಾಮ ಮಹಿಮೆ ಸಾರುವ ಭಕ್ತಿ ಪ್ರಧಾನ ಗೀತೆಗಳು ಎಲ್ಲೆಡೆ ಮೊಳಗಿದವು.

ಮಹಿಳೆಯರು, ಮಕ್ಕಳು, ವೃದ್ಧರು ಸೇರಿದಂತೆ ಎಲ್ಲರೂ ರಾಮನ ಶ್ರೀರಾಮ ಆಂಜನೇಯನ ದೇವರಿಗೆ ಭಕ್ತಿ ಪರವಶರಾದರು.

ದಿಮಘಟ್ಟನಹಳ್ಳಿ ಕುಟುಂಬದವರಿಂದ ಅರಳು ಮಲ್ಲಿಗೆ ಗೇಟ್ ಬಳಿ ಇರುವ ಶ್ರೀ ಪ್ರಸನ್ನಾಂಜನೇಯ ದೇವಸ್ಥಾನದಲ್ಲಿ ಸೌತೆಕಾಯಿ, ಕ್ಯಾರೆಟ್, ಕೊತ್ತಂಬರಿ ಸೊಪ್ಪು, ಹೆಸರು ಬೇಳೆ ಗೆಡ್ಡೆಕೋಸುಗಳಿಂದ ಗಣಪತಿ ಚಿತ್ರ ಬಿಡಿಸಿ ಅಲಂಕಾರ ಮಾಡಲಾಗಿತ್ತು. ಈ ಚಿತ್ರ‌ಭಕ್ತರ ಕಣ್ಮನ ಸೆಳೆಯಿತು.

Ramesh Babu

Journalist

Recent Posts

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

4 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

7 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

9 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

20 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

23 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

1 day ago