ಮಾರ್ಚ್ 2023ರ SSLC ವಾರ್ಷಿಕ ಪರೀಕ್ಷೆಯನ್ನು ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದ್ದು, ಇಂದು SSLC ವಾರ್ಷಿಕ ಪರೀಕ್ಷೆಯ ಫಲಿತಾಂಶ ಹೊರಬೀಳಲಿದೆ.
ಇಂದು ಬೆಳಗ್ಗೆ 10ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ, ಫಲಿತಾಂಶವನ್ನು http://karresults.nic.in ಜಾಲತಾಣದಲ್ಲಿ ಬೆಳಗ್ಗೆ 11ಕ್ಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಈ ಬಾರಿ ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಮೌಲ್ಯಮಾಪನಕ್ಕೆ ವ್ಯವಸ್ಥೆ ಮಾಡಲಾಗಿತ್ತು. 63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು.
ಈ ಮುಖ್ಯ ಪರೀಕ್ಷೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 273 ಪ್ರೌಢಶಾಲೆಗಳಿಂದ ಒಟ್ಟು 14040 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿತರಾಗಿದ್ದರು. ಇದರಲ್ಲಿ 7,218 ಮಂದಿ ಬಾಲಕರು, 6,822 ಮಂದಿ ಬಾಲಕಿಯರು ಇದ್ದಾರೆ. 295 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಈ ಬಾರಿ ಜಿಲ್ಲೆಯಲ್ಲಿ 58 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿತ್ತು, ಅದರಲ್ಲಿ ಖಾಸಗಿ ಪರೀಕ್ಷಾ ಅಭ್ಯರ್ಥಿಗಳಿಗಾಗಿ ಪ್ರತ್ಯೇಕವಾಗಿ ಒಂದು ಕೇಂದ್ರವನ್ನು ದೇವನಹಳ್ಳಿಯಲ್ಲಿ ಮೀಸಲಿರಿಸಲಾಗಿತ್ತು.
2023ರ ವಿಧಾನಸಭಾ ಚುನಾವಣೆಗೂ ಮುನ್ನಾ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಿಸಲು ತೀರ್ಮಾನಿಸಿದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ.
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…
ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್‌ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…
2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…