ಇಂದು ಮುಂಜಾನೆ ಸುಮಾರು 2 ರಿಂದ 3ಗಂಟೆ ಸಮಯದಲ್ಲಿ ವಿದ್ಯುತ್ ಮಗ್ಗದ ಮನೆಯಲ್ಲಿ ಕಳ್ಳರ ಕೈಚಳಕ ತೋರಿಸಿದ್ದಾರೆ. ನಗರದ ಮುಕ್ತಾಂಭಿಕಾ ನಗರದ 4ನೇ ಕ್ರಾಸ್ ಬಳಿಯ ಪ್ರಶಾಂತ್ ರಾವ್ ಎಂಬುವರ ಮಗ್ಗದ ಮನೆಯ ಬಾಗಿಲನ್ನು ಸಲಾಕೆಗಳಿಂದ ಮೀಟಿ ಸುಮಾರು 15 ಸಾವಿರ ಮೌಲ್ಯದ ಮಗ್ಗದ ಸಾಮಾಗ್ರಿಗಳನ್ನು ದೋಚಿದ್ದಾರೆ.
ಕಳ್ಳತನ ಕೃತ್ಯದಲ್ಲಿ ಸುಮಾರು 3-4 ಮಂದಿ ಕಳ್ಳರು ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಕಳವು ಮಾಡಲಾದ ಕೋನ್ ಗಳನ್ನುಸೀರೆಯ ಬಾರ್ಡರ್ ನ ಜರಿಯನ್ನಾಗಿ ಬಳಸಲಾಗುತ್ತಿತ್ತು, ಸುಮಾರು 8 ಕೋನ್ ಗಳನ್ನು ಕಳ್ಳರು ಕದ್ದೊಯ್ದಿದ್ದಾರೆ, ಇವುಗಳ ಮೌಲ್ಯ ಸುಮಾರು 15ರಿಂದ 20 ಸಾವಿರ ಬೆಲೆಬಾಳುತ್ತಿತ್ತು, ಮೂರಂತಸ್ಥಿನ ಮನೆಯಲ್ಲಿ ತಳ ಮಹಡಿಯಲ್ಲಿ ಮಗ್ಗದ ಕೆಲಸ ಮಾಡಲಾಗುತ್ತಿತ್ತು. ಮೇಲ್ಮಹಡಿಯಲ್ಲಿ ಮಾಲೀಕರು ವಾಸವಿದ್ದರು. ಇಂದು ಬೆಳಗ್ಗೆ ಬಂದು ನೋಡಿದಾಗ ಕಳ್ಳತನ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ದೊಡ್ಡಬಳ್ಳಾಪುರ ನಗರ ಠಾಣೆಗೆ ದೂರು ನೀಡಿದ ಪ್ರಶಾಂತ್ ರಾವ್.
ಇತ್ತೀಚೆಗೆ ಇದೇ ರಸ್ತೆಯಲ್ಲಿ ಒಂಟಿ ಮಹಿಳೆ ನಡೆದುಕೊಂಡು ಬರುವ ವೇಳೆ ಬೈಕ್ ನಲ್ಲಿ ಬಂದ ಖದೀಮರು ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದರು. ಈ ಕಳ್ಳತನ ಮಾಸುವ ಮೊದಲೇ ಇಂದು ಮಗ್ಗದ ಮನೆಯಲ್ಲಿ ಕಳ್ಳತನ ನಡೆದಿರುವುದು ಇಲ್ಲಿನ ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ.
ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿ ಇಂತಹ ಕೃತ್ಯಗಳು ಮತ್ತೆ ಮರುಕಳಿಸದಂತೆ ಕಳ್ಳರನ್ನು ಮಟ್ಟಹಾಕಿ ನೆಮ್ಮದಿ ಜೀವನ ನಡೆಸಲು ಅನುವುಮಾಡಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…