ಇಂದು ಬೆಳ್ಳಂಬೆಳಗ್ಗೆ ಮಗ್ಗದ ಮನೆಯಲ್ಲಿ ಕಳ್ಳತನ; ಸುಮಾರು 15 ಸಾವಿರ ಮೌಲ್ಯದ ಮಗ್ಗದ ಸಾಮಾಗ್ರಿಗಳನ್ನು ದೋಚಿದ ಕಳ್ಳರು

ಇಂದು ಮುಂಜಾನೆ ಸುಮಾರು 2 ರಿಂದ 3ಗಂಟೆ ಸಮಯದಲ್ಲಿ ವಿದ್ಯುತ್ ಮಗ್ಗದ ಮನೆಯಲ್ಲಿ ಕಳ್ಳರ ಕೈಚಳಕ ತೋರಿಸಿದ್ದಾರೆ. ನಗರದ ಮುಕ್ತಾಂಭಿಕಾ ನಗರದ 4ನೇ ಕ್ರಾಸ್ ಬಳಿಯ ಪ್ರಶಾಂತ್ ರಾವ್ ಎಂಬುವರ ಮಗ್ಗದ ಮನೆಯ ಬಾಗಿಲನ್ನು ಸಲಾಕೆಗಳಿಂದ ಮೀಟಿ ಸುಮಾರು 15 ಸಾವಿರ ಮೌಲ್ಯದ ಮಗ್ಗದ ಸಾಮಾಗ್ರಿಗಳನ್ನು ದೋಚಿದ್ದಾರೆ.

ಕಳ್ಳತನ ಕೃತ್ಯದಲ್ಲಿ ಸುಮಾರು 3-4 ಮಂದಿ ಕಳ್ಳರು ಭಾಗಿಯಾಗಿದ್ದಾರೆ ಎಂದು‌ ಶಂಕಿಸಲಾಗಿದೆ. ಕಳವು ಮಾಡಲಾದ ಕೋನ್ ಗಳನ್ನುಸೀರೆಯ ಬಾರ್ಡರ್ ನ ಜರಿಯನ್ನಾಗಿ ಬಳಸಲಾಗುತ್ತಿತ್ತು, ಸುಮಾರು 8 ಕೋನ್ ಗಳನ್ನು ಕಳ್ಳರು ಕದ್ದೊಯ್ದಿದ್ದಾರೆ, ಇವುಗಳ ಮೌಲ್ಯ ಸುಮಾರು 15ರಿಂದ 20 ಸಾವಿರ ಬೆಲೆಬಾಳುತ್ತಿತ್ತು, ಮೂರಂತಸ್ಥಿನ ಮನೆಯಲ್ಲಿ ತಳ ಮಹಡಿಯಲ್ಲಿ ಮಗ್ಗದ ಕೆಲಸ ಮಾಡಲಾಗುತ್ತಿತ್ತು. ಮೇಲ್ಮಹಡಿಯಲ್ಲಿ ಮಾಲೀಕರು ವಾಸವಿದ್ದರು. ಇಂದು ಬೆಳಗ್ಗೆ ಬಂದು ನೋಡಿದಾಗ ಕಳ್ಳತನ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ದೊಡ್ಡಬಳ್ಳಾಪುರ ನಗರ ಠಾಣೆಗೆ ದೂರು ನೀಡಿದ ಪ್ರಶಾಂತ್ ರಾವ್.

ಇತ್ತೀಚೆಗೆ ಇದೇ ರಸ್ತೆಯಲ್ಲಿ ಒಂಟಿ ಮಹಿಳೆ ನಡೆದುಕೊಂಡು ಬರುವ ವೇಳೆ ಬೈಕ್ ನಲ್ಲಿ ಬಂದ ಖದೀಮರು ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದರು. ಈ ಕಳ್ಳತನ ಮಾಸುವ ಮೊದಲೇ ಇಂದು ಮಗ್ಗದ ಮನೆಯಲ್ಲಿ ಕಳ್ಳತನ ನಡೆದಿರುವುದು ಇಲ್ಲಿನ ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ.

ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿ ಇಂತಹ ಕೃತ್ಯಗಳು ಮತ್ತೆ ಮರುಕಳಿಸದಂತೆ ಕಳ್ಳರನ್ನು ಮಟ್ಟಹಾಕಿ ನೆಮ್ಮದಿ ಜೀವನ ನಡೆಸಲು ಅನುವುಮಾಡಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

5 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

17 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

21 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

24 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

1 day ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

2 days ago