ಇಂದು ಬೆಳ್ಳಂ ಬೆಳಗ್ಗೆ ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದಾರೆ ಎಂದು ಪ್ರತ್ಯೇಕದರ್ಶಿಗಳಿಂದ ಮಾಹಿತಿ ತಿಳಿದುಬಂದಿದೆ.
ತನ್ನ ಮಗಳನ್ನು ಶಾಲೆಗೆ ಬಿಡಲು ಬೈಕ್ ನಲ್ಲಿ ಬಂದಿದ್ದ ವೆಂಕಟೇಶ್. ತುಮಕೂರು ಮಾರ್ಗವಾಗಿ ಬಂದತಹ ಟಿಪ್ಪರ್ ಲಾರಿ ಬೈಕ್ ಗೆ ಹೊಡೆದ ಪರಿಣಾಮ ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ವೆಂಕಟೇಶ್ ಮೃತಪಟ್ಟಿದ್ದಾರೆ. 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಶಾಲಾ ಬಾಲಕಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸ್ ಸಿಬ್ಬಂದಿ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.