“ಇಂದು ಭಾರತ ಚಕ್ರವ್ಯೂಹದಲ್ಲಿ ಸಿಲುಕಿದೆ”- ಇದು ಕಮಲದ ರೂಪದಲ್ಲಿದೆ- ಈ ಚಕ್ರವ್ಯೂಹದ ರೂವಾರಿಗಳಾಗಿ ಆರು ಜನರಿದ್ದಾರೆ-ವಿಪಕ್ಷ ನಾಯಕ ರಾಹುಲ್ ಗಾಧಿ ವಾಗ್ದಾಳಿ: ಯಾರು ಚಕ್ರವ್ಯೂಹದ ರೂವಾರಿಗಳು…?

ಲೋಕಸಭೆಯಲ್ಲಿ ಕೇಂದ್ರ ಬಜೆಟ್‌ ಬಗ್ಗೆ ನಡೆದ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಪಾಲ್ಗೊಂಡು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅಬ್ಬರದ ಭಾಷಣ ಮಾಡಿದ್ದಾರೆ.

ಚಕ್ರವ್ಯೂಹದ ಕುರಿತು ರಾಹುಲ್ ಗಾಂಧಿ ಹೇಳಿಕೆ ನಂತರ ಲೋಕಸಭೆಯಲ್ಲಿ ಭಾರೀ ಕೋಲಾಹಲ‌ ಸೃಷ್ಟಿಯಾಯಿತು. “ಸಾವಿರಾರು ವರ್ಷಗಳ ಹಿಂದೆ ಕುರುಕ್ಷೇತ್ರ ಚಕ್ರವ್ಯೂಹದಲ್ಲಿ ಯುವಕ ಅಭಿಮನ್ಯುವನ್ನು ಸಿಲುಕಿಸಿ 6 ಜನರು ಕೊಂದರು”. ನಾನು ಸ್ವಲ್ಪ ಸಂಶೋಧನೆ ಮಾಡಿದ್ದೇನೆ ಮತ್ತು ಚಕ್ರವ್ಯೂಹವನ್ನು ಪದ್ಮವ್ಯೂಹ ಎಂದು ಕೂಡ ಕರೆಯುತ್ತಾರೆ. ಅದು ಕಮಲದ ರೂಪದಲ್ಲಿ ಇರುತ್ತದೆ ಎಂಬುದನ್ನು ಕಂಡುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಮುಂದುವರಿದು 21 ನೇ ಶತಮಾನದಲ್ಲಿ ಭಾರತದಲ್ಲಿ ಒಂದು ಹೊಸ ‘ಚಕ್ರವ್ಯೂಹ’ ರೂಪುಗೊಂಡಿದೆ. ಅದು ಕೂಡ ಕಮಲದ ರೂಪದಲ್ಲಿಯೇ ತನ್ನ ಚಿಹ್ನೆಯನ್ನು ಧರಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ಎದೆಯ ಮೇಲೆ ಧರಿಸಿರುತ್ತಾರೆ. ಈ ಚಕ್ರವ್ಯೂಹದ ರೂವಾರಿಗಳಾಗಿ ಆರು ಜನರಿದ್ದಾರೆ. ಅವರು ಯಾರೆಂದರೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಹಾಗೂ ಉದ್ಯಮಿಗಳಾದ ಮುಖೇಶ್‌ ಅಂಬಾನಿ ಹಾಗೂ ಗೌತಮ್‌ ಅದಾನಿ ಇದ್ದಾರೆ ಎಂದು ಕೇಂದ್ರ ಸರ್ಕಾರಕ್ಕೆ ಟಾಂಗ್‌ ನೀಡುವ ಪ್ರಯತ್ನವನ್ನು ಮಾಡಿದರು.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

9 minutes ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

12 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

16 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

19 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

21 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago