
ಇಂದು ಮುಂಜಾನೆ ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಗೆ ಸಿಮೆಂಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನೆ ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿಯಲ್ಲಿರುವ ಪೆಟ್ರೋಲ್ ಬಂಕ್ ಎದುರು ನಡೆದಿದೆ.
ಮೃತನನ್ನು ಉತ್ತರ ಭಾರತದ ಮೂಲದವನು ಎಂದು ತಿಳಿದುಬಂದಿದೆ. ಸದ್ಯ ಹೆಸರು, ವಯಸ್ಸು ತಿಳಿದುಬಂದಿರುವುದಿಲ್ಲ. ಬಾಶೆಟ್ಟಿಹಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದನು ಎಂದು ಮಾಹಿತಿ ಒದಗಿಬಂದಿದೆ….
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….