ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರು ಬ್ಯಾಂಕಾಕ್ ನಲ್ಲಿ ಹೃದಯಾಘಾತದಿಂದ ವಿಧಿವಶ ಹಿನ್ನೆಲೆ, ಬ್ಯಾಂಕಾಕ್ ನಲ್ಲಿ ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ಈಗಾಗಲೇ ಪೂರ್ಣಗೊಂಡಿದೆ. ಇಂದು ಸಂಜೆ ಅಥವಾ ರಾತ್ರಿ ಬ್ಯಾಂಕಾಕ್ನಿಂದ ಬೆಂಗಳೂರಿಗೆ ಸ್ಪಂದನಾ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ನಾಳೆ ಅಂತ್ಯಕ್ರಿಯೆ ನೆರವೇರಲಿದೆ. ಅಂತ್ಯಕ್ರಿಯೆಯ ಸ್ಥಳದ ಬಗ್ಗೆ ನಟ ವಿಜಯ್ ರಾಘವೇಂದ್ರ ಅವರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.
ಅಂತಿಮ ವಿಧಿ ವಿಧಾನ ಹಾಗೂ ಅಂತ್ಯಕ್ರಿಯೆ ಬೆಂಗಳೂರಿನಲ್ಲಿಯೇ ನಡೆಸಬೇಕೋ ಅಥವಾ ಮಂಗಳೂರು ಸಮೀಪ ಬೆಳ್ತಂಗಡಿಯಲ್ಲಿ ನಡೆಸಬೇಕೋ ಎಂಬುದನ್ನು ನಟ ವಿಜಯರಾಘವೇಂದ್ರ ತೀರ್ಮಾನ ಮಾಡಲಿದ್ದಾರೆ.