ಮೆಜೆಸ್ಟಿಕ್ ನಲ್ಲಿ ಜಮಾಯಿಸಿರುವ ಕೆಎಸ್ಆರ್ ಟಿಸಿ ಬಸ್ ಗಳು. ಮಹಿಳೆಯರಿಗೆ ಪಿಂಕ್ ಕಲರ್ ನಿಂದ ಕೂಡಿರುವ ವಿಶೇಷ ಟಿಕೆಟ್ ರೆಡಿ ಆಗಿದೆ. ಟಿಕೆಟ್ ನೀಡುವ ವಿದ್ಯುತ್ ಯಂತ್ರ ಕೆಟ್ಟೋದಾಗ ಮಾತ್ರ ಕೊಡುವಂತ ಟಿಕೆಟ್ ಇದು. ಕೆಎಸ್ಆರ್ ಟಿಸಿ ವತಿಯಿಂದ ಟಿಕೆಟ್ ಅನಾವರಣ ಮಾಡಲಾಗಿದೆ. ಕೆಎಸ್ಆರ್ ಟಿಸಿಯಲ್ಲಿ ಲಾಂಗ್ ರೂಟ್ ಬಸ್ ಗಳಿಗೆ ಮಾತ್ರ ಈ ಟಿಕೆಟ್ ಅನ್ವಯ ಆಗುತ್ತದೆ.
ಇಂದು ಮಧ್ಯಾಹ್ನ 1 ರಿಂದಲೇ ರಾಜ್ಯದ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ ಗಳಲ್ಲಿ ಸಂಚರಿಸಬಹುದಾಗಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಭಾನುವಾರ ಬೆಳಿಗ್ಗೆ 11ಕ್ಕೆ ವಿಧಾನಸೌಧದ ಪೂರ್ವದ್ವಾರದ ಮುಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರಿಸಲಿದ್ದು, ಮಧ್ಯಾಹ್ನ 1 ರಿಂದಲೇ ರಾಜ್ಯದ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ ಗಳಲ್ಲಿ ಸಂಚರಿಸಬಹುದಾಗಿದೆ.
ಕಾರ್ಯಕ್ರಮದಲ್ಲಿ ಬಿಎಂಟಿಸಿಯ 2 ಬಸ್ ಗಳಿಗೆ ಚಾಲನೆ ನೀಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಂಕೇತಿಕವಾಗಿ ಆಯ್ದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದ್ದಾರೆ. ನಂತರ ವಿಧಾನಸೌಧದಿಂದ ಮೆಜೆಸ್ಟಿಕ್ ವರೆಗೆ ಬಿಎಂಟಿಸಿ ಬಸ್ ನಲ್ಲಿ ಆಗಮಿಸುವರು. ಮೆಜೆಸ್ಟಿಕ್ ನಲ್ಲಿ ಬಿಎಂಟಿಸಿ ಮತ್ತು ಕೆಎಸ್ಆರ್’ಟಿಸಿ ಬಸ್ ನಿಲ್ದಾಣದಲ್ಲಿ ಸಾಂಕೇತಿಕವಾಗಿ ಪ್ರಯಾಣಿಕರಿಗೆ ಶೂನ್ಯ ದರದ ಟಿಕೆಟ್ ವಿತರಿಸುವರು.
ಈ ವೇಳೆ ಡಿಸಿಎಂ ಡಿಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೇರಿದಂತ ಮತ್ತಿತರರು ಮುಖ್ಯಮಂತ್ರಿಗಳಿಗೆ ಸಾಥ್ ನೀಡಲಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…