ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾರ್ವಜನಿಕರು ಸಲ್ಲಿಸುವ ದೂರು ಹಾಗೂ ಮನವಿಗಳನ್ನು ಸ್ವೀಕರಿಸಲು ಇಲಾಖಾವಾರು ಕೌಂಟರ್ ಗಳು, ಅಧಿಕಾರಿಗಳ ನಿಯೋಜನೆ ಹಾಗೂ ಎಸ್ ಒ.ಪಿ ಜಾರಿ ಮಾಡಿ ಆದೇಶಿಸಲಾಗಿದೆ.
ಮುಖ್ಯಮಂತ್ರಿಯವರ ಜನತಾದರ್ಶನ ನಡೆಯುವ ಸ್ಥಳದಲ್ಲಿ ಸಚಿವಾಲಯದ ಎಲ್ಲಾ ಇಲಾಖೆಗಳ ಸ್ಟಾಲ್ ಗಳನ್ನು ಅಳವಡಿಸಲಾಗಿದ್ದು, ಪ್ರತಿ ಸ್ಟಾಲ್ ಗಳಿಗೆ ಸಂಖ್ಯೆಯನ್ನು ನೀಡಲಾಗಿದೆ. ಜನತಾದರ್ಶನಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ನಾಗರಿಕರನ್ನು ಪ್ರಥಮಹಂತದಲ್ಲಿ ವಿಚಾರಿಸಿ, ಯಾವ ಇಲಾಖೆಯ ಸ್ಟಾಲ್ ಗೆ ನಿರ್ದೇಶಿಸಿ ಕಳಿಸಬೇಕು ಎಂದು ವಿಂಗಡಿಸಲು ಅನುಭವಿ ಅಧಿಕಾರಿ – ಸಿಬ್ಬಂದಿ ವಿಚಾರಣಾ ಕೌಂಟರ್ (enquiry counter) ತೆರೆಯಲಾಗಿದೆ. ಆಲ್ಲಿ ನಾಗರಿಕರ ಮೊಬೈಲ್ ನಂಬರ್ & ಪ್ರಾಥಮಿಕ ವಿವರಗಳನ್ನು ದಾಖಲಿಸಲು ರಿಜಿಸ್ಟರ್ ಹಾಗೂ ಅವರನ್ನು ಯಾವ ಇಲಾಖೆಗೆ ಕಳಿಸಲಾಗಿದೆ ಎಂದು ಸ್ಟಾಲ್ ನಂಬರ್ ನಮೂದಿಸಲಾಗುವುದು. ಸ್ಟಾಲ್ ಗಳಲ್ಲಿ ನಾಗರಿಕರಿಗೆ ಕುಳಿತುಕೊಳ್ಳಲು ಕುರ್ಚಿಗಳ ವ್ಯವಸ್ಥೆ, ವಯೋವೃದ್ಧರು, ಹಿರಿಯ ನಾಗರಿಕರು, ವಿಕಲಚೇತನರು, ಗರ್ಭಿಣಿಯರು, ಸಣ್ಣ ಮಕ್ಕಳೊಂದಿಗೆ ಬಂದಂತಹ ನಾಗರಿಕರಿಗೆ ಆದ್ಯತೆ ನೀಡಲು ಸೂಚಿಸಲಾಗಿದೆ.
ಹಿರಿಯ ನಾಗರಿಕರು: ವಿಕಲಚೇತನರಿಗೆ ವ್ಹೀಲ್ ಚೇರ್ ವ್ಯವಸ್ಥೆ
ವಯೋವೃದ್ಧರು, ಹಿರಿಯ ನಾಗರಿಕರು, ವಿಕಲಚೇತನರು, ಗರ್ಭಿಣಿಯರಿಗಾಗಿ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಂಬಂಧಿಸಿದ ಇಲಾಖೆಯ ಸ್ಟಾಲ್ ಗೆ ಅವರನ್ನು ಕರೆದೊಯ್ಯುವ ವ್ಯವಸ್ಥೆಯಾಗಿದೆ.
ಜನತಾದರ್ಶನಕ್ಕೆ ಆಗಮಿಸುವ ನಾಗರಿಕರಿಗೆ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಐದರಿಂದ ಹತ್ತು ಸಾವಿರ ಜನರಿಗೆ ಆಹಾರ ಪೂರೈಸುವಂತಹ ವ್ಯವಸ್ಥೆಯಾಗಿದೆ.
ಜನತಾದರ್ಶನಕ್ಕೆ ಬರುವ ಎಲ್ಲಾ ಸಾರ್ವಜನಿಕರು ಹಾಗೂ ದಿವ್ಯಾಂಗರಿಗೆ ಸ್ವಚ್ಛ ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.
ಸಾರಿಗೆ ವ್ಯವಸ್ಥೆ
ಜನಸ್ಪಂದನಾ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲು ಬಿಎಂಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
3738 ಅರ್ಜಿ ವಿಲೇವಾರಿ
ನವೆಂಬರ್ 27 ರಂದು ನಡೆದ ಜನತಾ ದರ್ಶನದಲ್ಲಿ 4030 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಈವರೆಗೆ 3738 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.
ಒಟ್ಟಾರೆ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸುಗಮವಾಗಿ ಪರಿಹಾರವನ್ನು ಪಡೆಯಲು ಜನಸ್ಪಂದನ ಕಾರ್ಯಕ್ರಮ ನೆರವಾಗಲು ಭರದ ಸಿದ್ಧತೆ ನಡೆದಿದೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…