ಇಂದು (ಸೆ.8) ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರ ವ್ಯಾಪ್ತಿಯಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 8ರಂದು ನಗರದ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ದೊಡ್ಡಬಳ್ಳಾಪುರ ನಗರದ 66/11 ಕೆವಿ ಡಿ.ಕಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ DF10–ವಸವಿ ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಫೀಡರ್‌ಗೆ ಒಳಪಡುವ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಬೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

ಪಾಲನಜೋಗಿಹಳ್ಳಿ, ಕುವೆಂಪುನಗರ, ಟಿಬಿ ಸರ್ಕಲ್, ಟಿಬಿ ನಾರಾಯಣಪ್ಪ ಬಡಾವಣೆ, ಮಲ್ಲತ್ತಹಳ್ಳಿ, ಗಂಗಾಧರಪುರ, ಬಸವಭವನ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಹಾಗೂ ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

22 minutes ago

ನಕಲಿ ಔಷಧಿಗಳ ಮಾರಾಟ ಜಾಲದ ಕಿಂಗ್‌ಪಿನ್ ಪ್ರಶಾಂತ್ ಪೊಲೀಸರ ವಶಕ್ಕೆ

ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…

20 hours ago

ಒಂದು ವಾರದೊಳಗೆ ಮಳೆಯಾಗದಿದ್ದರೆ ಬಿತ್ತನೆಯಾದ ಬೆಳೆಗೂ ಕುತ್ತು | ರಾಗಿ, ಮೆಕ್ಕೆಜೋಳಕ್ಕೆ ತೇವಾಂಶದ ಕೊರತೆ | ಕೆರೆ-ಕುಂಟೆಗಳು ಖಾಲಿ, ಮೇವಿನ ಕೊರತೆಯ ಆತಂಕ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…

24 hours ago

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

2 days ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

2 days ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

2 days ago