“ಇಂದೇ ಸಕಾಲ” ಯೋಜನೆಯಡಿ ಹಿರಿಯ ನಾಗರಿಕರ ಗುರುತಿನ ಚೀಟಿಗೆ ಅನುಮೋದನೆ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಸದ್ಯ “ಸಕಾಲ “ಯೋಜನೆಯಡಿ ಹಿರಿಯ ನಾಗರಿಕರ ಗುರುತಿನ ಚೀಟಿಯನ್ನು ವಿತರಣೆ ಮಾಡಲಾಗುತ್ತಿದೆ ಆದರೆ  ಸಾಕಷ್ಟು ಹಿರಿಯರು ನಾಗರಿಕರು ಈ ಗುರುತಿನ ಚೀಟಿಯನ್ನು ಪಡೆಯಲು ಎರಡು -ಮೂರು ಬಾರಿ ಪೇಟೆಗಳಿಗೆ ಅಥವಾ ಹೋಬಳಿ ಕೇಂದ್ರಕ್ಕೆ ಬಂದು ಹೋಗಿ ಗುರುತಿನ ಚೀಟಿಯನ್ನು ಪಡೆಯಬೇಕಿದೆ.ಇದರಿಂದ ಹಿರಿಯರಿಗೆ ಆರ್ಥಿಕ ಹೊರೆ ಮತ್ತು ಸಮಯ ವ್ಯರ್ಥವಾಗುತ್ತದೆ ಎಂದು ಸಾಕಷ್ಟು ಹಿರಿಯರೊಂದಿಗೆ ಸಮಾಲೋಚನೆ ನಡೆಸಿದ ಸಂದರ್ಭದಲ್ಲಿ ಇಲಾಖೆಯ ಗಮನಕ್ಕೆ ಬಂದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಕ್ಷೇಯೋಭಿವೃದ್ದಿಗೆ “ಸಂಗಮ”, “ಪ್ರತಿ ಶುಕ್ರವಾರ ಹಿರಿಯ ನಾಗರಿಕರ ಮನರಂಜನೆ ಮತ್ತು ಕ್ಷೇಮಾಭಿವೃದ್ಧಿ ದಿನ ಆಚರಣೆ ” ಸೇರಿದಂತೆ ಅನೇಕ ವಿನೂತನವಾದ  ಅತ್ಯಅವಶ್ಯಕ ಕಾರ್ಯಕ್ರಮಗಳನ್ನ ರೂಪಿಸಿ ಅನುಷ್ಠಾನ ಮಾಡಲಾಗುತ್ತಿದೆ.

ಹಿರಿಯ ನಾಗರಿಕರ ಯೋಜನೆಗಳನ್ನು ಮತ್ತಷ್ಟು ಜನಸ್ನೇಹಿಯಾಗಿಸಲು ಹಾಗೂ ಶೀಘ್ರ ತಲುಪಿಸಲು ಹಿರಿಯ ನಾಗರಿಕರ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಿದ ದಿನವೇ ಹಿರಿಯರಿಗೆ ಗುರುತಿನ ಚೀಟಿ ಕೈ ಸೇರುವಂತೆ ಮಾಡಲು “ಇಂದೇ ಸಕಾಲ” ಘೋಷ ವಾಕ್ಯದೊಂದಿಗೆ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸುವ ಎಲ್ಲಾ ಹಿರಿಯ ನಾಗರಿಕರ ಅರ್ಜಿಗಳನ್ನು ಎಲ್ಲಾ ಕಚೇರಿ ಕೆಲಸದ ದಿನಗಳಂದು 1.00 ಗಂಟೆಗೆ ಸೇವಾ ಸಿಂಧು ಪೋರ್ಟಲ್ ನ ಸಕಾಲದಲ್ಲಿ ಪರಿಶೀಲಿಸಿ ಅನುಮೋದನೆ ಮಾಡಲಾಗುವುದು.

ಇದೇ ಸಮಯಕ್ಕೆ ಅರ್ಜಿ ಸಲ್ಲಿಸಿದ ಕೇಂದ್ರದಲ್ಲಿ ಸಹಿ ಹೊಂದಿದ ಹಿರಿಯ ನಾಗರಿಕ ಗುರುತಿನ ಚೀಟಿಯನ್ನು ಅದೇ ದಿನ(ಕಚೇರಿ ಕೆಲಸದ ದಿನ) ಸ್ಥಳದಲ್ಲಿಯೆ ಹಿರಿಯ ನಾಗರಿಕರು ಪಡೆಯಬಹುದಾಗಿದೆ.

ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕರು “ಇಂದೇ ಸಕಾಲ” ಯೋಜನೆಯಡಿ ಶೀಘ್ರ ಹಿರಿಯ ನಾಗರಿಕರ ಗುರುತಿನ ಚೀಟಿ ಅನುಕೂಲ ಪಡೆಯಲು ಕೋರಿದೆ .

ಹಿರಿಯ ನಾಗರಿಕರ ಗುರುತಿನ ಚೀಟಿ ಅರ್ಜಿ ಸಲ್ಲಿಸಲು ಹೆಚ್ಚಿನ ಮಾಹಿತಿಗೆ, ಹಿರಿಯ ನಾಗರಿಕರ ಸಹಾಯವಾಣಿ 1090 ಸಂಪರ್ಕಿಸಿ. ಈ ಸಂಬಂಧ ಯಾವುದೇ ಸಮಸ್ಯೆಗಳಿದ್ದರೆ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ದೂರವಾಣಿ  08029787441 ಸಂಪರ್ಕಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಎನ್.ಎಂ ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

30 minutes ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

2 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

13 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

13 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

16 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

24 hours ago