
ಮಹಾರಾಷ್ಟ್ರದ ಪುಣೆ ಬಳಿಯ ಇಂದ್ರಾಯಣಿ ನದಿ ಸೇತುವೆಯೊಂದು ಭಾನುವಾರ ಕುಸಿದು ಬಿದಿದೆ. ಸೇತುವೆ ಮೇಲಿದ್ದ ಆರು ಮಂದಿ ಪ್ರವಾಸಿಗರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಪಿಂಪ್ರಿ-ಚಿಂಚ್‌ವಾಡ್ ಜಿಲ್ಲೆಯ ಮಾವಲ್ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಕುಂದಮಾಲಾ ಗ್ರಾಮದ ಬಳಿ ಈ ಘಟನೆ ನಡೆದಿದೆ.

ರಮಣೀಯ ಜಲಪಾತ ಮತ್ತು ನದಿ ದಡದಿಂದ ಪ್ರತಿವರ್ಷ ನೂರಾರು ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಇಂದು ಕೂಡಾ ಹೆಚ್ಚಾಗಿ ಪ್ರವಾಸಿಗರು ಆಗಮಿಸಿದ ವೇಳೆಯಲ್ಲಿ ಈ ದುರ್ಘಟನೆ ನಡೆದಿದೆ.
ಸದ್ಯ 5 ರಿಂದ 6 ಜನರನ್ನು ರಕ್ಷಿಸಲಾಗಿದೆ. ಇನ್ನೂ 10 ರಿಂದ 15 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ ಎಂದು ಪಿಂಪ್ರಿ-ಚಿಂಚ್‌ವಾಡ್ ಪೊಲೀಸರು ತಿಳಿಸಿದ್ದಾರೆ.