ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

 

ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ ಪಕ್ಷದ ಕಾರ್ಯಕರ್ತರು ಮಂಗಳವಾರ ದೊಡ್ಡಬಳ್ಳಾಪುರ ನಗರದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ್ ನಾಯಕ್, ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಕಳೆದ ತಿಂಗಳಲ್ಲಿ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಿಸಿರುವುದನ್ನು ಖಂಡಿಸಿದರು. ಕೇವಲ 11 ದಿನಗಳ ಅಂತರದಲ್ಲಿ ನಾಲ್ಕು ಬಾರಿ ಇಂಧನ ದರ ಏರಿಕೆಯಾಗಿರುವುದು ಜನಸಾಮಾನ್ಯರ ಮೇಲೆ ಹೆಚ್ಚುವರಿ ಹೊರೆ ತಂದಿದ್ದು, ಜನರ ಜೀವನ ನಿರ್ವಹಣೆಗೆ ತೊಂದರೆಯಾಗುತ್ತಿದೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮೇ ತಿಂಗಳಲ್ಲಿ ಕಚ್ಚಾ ತೈಲದ ಬೆಲೆ ಶೇ.20ರಷ್ಟು ಇಳಿಕೆಯಾಗಿದ್ದರೂ ಅದರ ಲಾಭವನ್ನು ದೇಶದ ಜನರಿಗೆ ತಲುಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ಬಡವರು, ದೀನದಲಿತರು, ಅಲ್ಪಸಂಖ್ಯಾತರು, ಕೂಲಿಕಾರ್ಮಿಕರು, ರೈತರು, ನೇಕಾರರು, ಶ್ರಮಿಕರು ಹಾಗೂ ಮಧ್ಯಮ ವರ್ಗದ ಜನರು ಬೆಲೆ ಏರಿಕೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಪಕ್ಷದ ಮುಖಂಡ ಡಿ.ಪಿ. ಆಂಜನೇಯ ಮಾತನಾಡಿ, ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ಪರಿಣಾಮವಾಗಿ ಇಂಧನ ದರಗಳು ನಿರಂತರವಾಗಿ ಏರಿಕೆಯಾಗುತ್ತಿವೆ ಎಂದು ಆರೋಪಿಸಿದ ಅವರು ಉದ್ಯೋಗ ಸೃಷ್ಟಿ, ಕಾರ್ಮಿಕರ ಹಕ್ಕುಗಳ ರಕ್ಷಣೆ ಹಾಗೂ ರೈತರ ಕಲ್ಯಾಣದ ವಿಚಾರಗಳಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ಲಕ್ಷಾಂತರ ವಿದ್ಯಾರ್ಥಿಗಳು ತೊಂದರೆಗೆ ಒಳಗಾಗಿದ್ದು, ಕಾರ್ಮಿಕರು ತಮ್ಮ ವೇತನ ಮತ್ತು ಹಕ್ಕುಗಳಿಗಾಗಿ ಹೋರಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಕೇಂದ್ರ ಸರ್ಕಾರವನ್ನು ಜನರು ತಿರಸ್ಕರಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕನ್ನಡ ಪಕ್ಷದ ಹಿರಿಯ ಮುಖಂಡರಾದ ವೆಂಕಟೇಶ್, ಕುಮಾರ್, ರಮೇಶ್ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

8 hours ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

10 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

13 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

14 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

21 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

21 hours ago