ಇತಿಹಾಸ ಪ್ರಸಿದ್ಧ ಘಾಟಿ ಕ್ಷೇತ್ರದ ಚಂಪಾ ಷಷ್ಠಿ: ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಅಲಂಕಾರ: ದೇವರ ದರ್ಶನಕ್ಕಾಗಿ ಕಿಕ್ಕಿರಿದು ಸೇರಿದ ಭಕ್ತಾಧಿಗಳು

ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಕ್ಷೇತ್ರದ ಚಂಪಾ ಷಷ್ಠಿ ಅಂಗವಾಗಿ ಸುಬ್ರಹ್ಮಣ್ಯಸ್ವಾಮಿಗೆ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮಗಳು ಬುಧವಾರ ಶ್ರದ್ಧಾಭಕ್ತಿಯಿಂದ ನಡೆದವು.

ಬೆಳಗಿನ ಜಾವ 5 ಗಂಟೆಗೆ ಅಭಿಷೇಕ ಹಾಗೂ ಮಹಾಮಂಗಳಾರತಿ ನಡೆಯಿತು. ಸುಬ್ರಹ್ಮಣ್ಯಸ್ವಾಮಿಯ ಪ್ರಾಕಾರೋತ್ಸವ ನಡೆಯಿತು. ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು.

ನಾಗಾರಾಧನೆಗೆ ಪ್ರಸಿದ್ದವಾಗಿರುವ ಘಾಟಿ ಕ್ಷೇತ್ರದಲ್ಲಿ ಚಂಪಾ ಷಷ್ಠಿಯ ಅಂಗವಾಗಿ ಭಕ್ತಾದಿಗಳು ಹುತ್ತಗಳು ಹಾಗೂ ನಾಗರಕಲ್ಲುಗಳಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದರು.

ನೂರಾರು ಭಕ್ತಾದಿಗಳು ಸಾಲುಗಟ್ಟಿ ನಿಂತು ಸುಬ್ರಹ್ಮಣ್ಯಸ್ವಾಮಿ ಹಾಗೂ ಲಕ್ಷ್ಮಿನರಸಿಂಹ ಸ್ವಾಮಿಯವರ ದರ್ಶನ ಪಡೆದರು. ದೇವಾಲಯದಲ್ಲಿ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

*ಡಿಸೆಂಬರ್ 25 ಕ್ಕೆ ಬ್ರಹ್ಮರಥೋತ್ಸವ*

ಶ್ರೀ ಘಾಟಿ ಸುಬ್ರಮಣ್ಯರವರ ಬ್ರಹ್ಮರಥೋತ್ಸವ ಡಿಸೆಂಬರ್ 25 ರಂದು  ನಡೆಯಲಿದೆ. ಈ ಬಾರಿ ವಿಶೇಷವಾಗಿ ಪುಷ್ಪಲಂಕಾರ ದೀಪ ಅಲಂಕಾರಗಳಿರುತ್ತದೆ. ಭಕ್ತಾದಿಗಳ ಅನುಕೂಲಕ್ಕೆ ಕುಡಿಯುವ ನೀರಿನ ವ್ಯವಸ್ಥೆ, ಕ್ಯೂಲೈನ್ ವ್ಯವಸ್ಥೆ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಇರಲಿದೆ.

*ಸುಂಕ ರಹಿತ ಜಾತ್ರೆ*

ಈ ಬಾರಿಯ ಘಾಟಿ ಜಾತ್ರೆಯಲ್ಲಿ ಜಾನುವಾರುಗಳಿಗೆ ಹಾಗೂ ಬರುವಂತಹ ಭಕ್ತಾದಿಗಳ ವಾಹನಗಳಿಗೆ ಸುಂಕ ಇರುವುದಿಲ್ಲ. ಹಿರಿಯ ನಾಗರಿಕರಿಗೆ, ವಿಶೇಷ ಚೇತನರಿಗೆ, ಗರ್ಭಿಣಿ ಬಾಣಂತಿಯರಿಗೆ ನೇರವಾಗಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು.

*ಡಿ.10 ರಿಂದ 18 ವರೆಗೆ ರಾಸುಗಳ ಜಾತ್ರೆ*

ಡಿಸೆಂಬರ್ 10 ರಿಂದ 18 ರವರೆಗೆ ರಾಸುಗಳ ಜಾತ್ರೆ ನಡೆಯಲಿದೆ ರಾಸುಗಳ ಜಾತ್ರೆ ಸಮಯದಲ್ಲಿ ವಿಶೇಷ ದೀಪಾಲಂಕಾರ, ರೈತರಿಗೆ ಮತ್ತು ರಾಸುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ರಾಸುಗಳಿಗೆ ರೋಗಗಳು ಹರಡದಂತೆ ಪಶು ವೈದ್ಯರ ವ್ಯವಸ್ಥೆ ಕಲ್ಪಿಸಲಾಗುವುದು. ರಾಸುಗಳ ಜಾತ್ರೆಗೆ ಆಗಮಿಸುವ ರೈತರಿಗೆ ತಿಂಡಿ ಮತ್ತು ಊಟದ ವ್ಯವಸ್ಥೆಯನ್ನು ದೇವಾಲಯದ ವತಿಯಿಂದ ಕಲ್ಪಿಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ….

Ramesh Babu

Journalist

Recent Posts

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

2 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

5 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

7 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

18 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

22 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

23 hours ago