ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ ಮನೆ ಮಾಡಿತ್ತು.
ಲಕ್ಷ ದೀಪೋತ್ಸವದಲ್ಲಿ ಸಾವಿರಾರು ಮಂದಿ ಭಕ್ತರು ಪಾಲ್ಗೊಂಡು ದೇವರಲ್ಲಿ ಪ್ರಾರ್ಥನೆ ಮಾಡುತ್ತಾ ದೀಪ ಹಚ್ಚಿ ದೇವರ ಕೃಪೆಗೆ ಪಾತ್ರರಾದರು.
ಭಕ್ತಾಧಿಗಳು ಮಣ್ಣಿನ ಹಣತೆಯಲ್ಲಿ ಎಣ್ಣೆ ಹಾಕಿ ವಿವಿಧ ಆಕೃತಿಗಳಲ್ಲಿ ಜೋಡಿಸಿ ದೀಪ ಹಚ್ಚುವ ಮೂಲಕ ಭಕ್ತಿ ಸಮರ್ಪಣೆ ಮಾಡಿದರು.
ಲಕ್ಷದೀಪೋತ್ಸವ ಅಂಗವಾಗಿ ಇಡೀ ದೇವಾಲಯ ದೀಪಗಳ ಬೆಳಕಿನಲ್ಲಿ ಪ್ರಜ್ವಲಿಸಿತು.