ಇನ್ನೇನು ಕೆಲವೇ ಕ್ಷಣಗಳಲ್ಲಿ ರಾಜ್ಯದ ಸಿಎಂ ಆಗಿ ಸಿದ್ದರಾಮಯ್ಯ -ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೊತೆ 8 ಶಾಸಕರು ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ರಾಜ್ಯದ ಸಿಎಂ ಆಗಿ ಎರಡನೇ ಬಾರಿ ಸಿದ್ದರಾಮಯ್ಯ ಹಾಗೂ ಮೊದಲ ಬಾರಿ ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೊಟ್ ಇಬ್ಬರೂ ನಾಯಕರಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಸಮಾರಂಭದಲ್ಲಿ ಗಣ್ಯಾತಿಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಕಲ ಸಿದ್ಧತೆ, ಭದ್ರತೆ ಮಾಡಲಾಗಿದೆ.