ಇನ್ನೂ ಮುಂದೆ ಜಿಲ್ಲಾ‌ಮಟ್ಟದಲ್ಲೇ ಜನರ ಅಹವಾಲು ಸ್ವೀಕಾರ: ಪ್ರತಿ ತಿಂಗಳು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ‘ಜನತಾ ದರ್ಶನ’: ಸೆ.25ಕ್ಕೆ ಜನತಾ ದರ್ಶನಕ್ಕೆ ಸಿಎಂ ಚಾಲನೆ

ರಾಜ್ಯದ ವಿವಿಧ ಭಾಗಗಳಿಂದ ನಾಗರಿಕರು ಬೆಂಗಳೂರಿಗೆ ಆಗಮಿಸಿ ಹಲವಾರು ರೀತಿಯ ಸಮಸ್ಯೆಗಳನ್ನು ಕುರಿತು ಸಂಬಂಧಪಟ್ಟ ಇಲಾಖೆ ಸಚಿವರು, ಅಧಿಕಾರಿಗಳು, ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಿದ್ದಾರೆ.

ಇದನ್ನು ತಪ್ಪಿಸಿ ಜನ ಸ್ನೇಹಿ ಸರ್ಕಾರವನ್ನಾಗಿಸಲು ಜನರ ಸಮಸ್ಯೆಗಳ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು “ಜನತಾ ದರ್ಶನ” ಕಾರ್ಯಕ್ರಮ ಹಮ್ಮಿಕೊಂಡು ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ‌ ಸೆ.25ರಂದು ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಶಿಷ್ಟಾಚಾರಕ್ಕೆ ಅನುಗುಣವಾಗಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ಸೂಚಿಸಿರುತ್ತಾರೆ.

ಈ ಸಂಬಂಧ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಿಕೊಂಡು, ವ್ಯವಸ್ಥಿತವಾಗಿ ಹಾಗೂ ಜವಾಬ್ದಾರಿಯುತವಾಗಿ ನಡೆಸುವ ಕುರಿತು ಸೂಕ್ತ ಕ್ರಮವಹಿಸಲು ಸೂಚಿಸಿದೆ.

ಸಂಬಂಧಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಯಾ ಜಿಲ್ಲಾಧಿಕಾರಿಗಳೊಂದಿಗೆ ಜರೂರಾಗಿ ಸಮನ್ವಯ ಸಾಧಿಸಿಕೊಂಡು ಸದರಿ ದಿನದಂದು ನಡೆಯಲಿರುವ ಜನತಾ ದರ್ಶನ ಕಾರ್ಯಕ್ರಮಕ್ಕೆ ರೂಪು ರೇಷೆಗಳನ್ನು ಸಿದ್ಧಪಡಿಸಿಕೊಳ್ಳಬೇಕೆಂದು ಸರ್ಕಾರ ಆದೇಶಿಸಲಾಗಿದೆ.

ಜಿಲ್ಲಾಡಳಿತವು ಆಯಾ ಜಿಲ್ಲೆಯ ಜನರಿಗೆ ಜನತಾ ದರ್ಶನ ನಡೆಯುವ ಸ್ಥಳ, ವೇಳ ಇತ್ಯಾದಿಗಳನ್ನು ಜಾಹಿರಾತು ಮುಖಾಂತರ ಮುಂಚಿತವಾಗಿಯೇ ತಿಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ನೋಡಿಕೊಳ್ಳತಕ್ಕದ್ದು.

ಸದರಿ ದಿನದಂದು ಎಲ್ಲಾ ಜಿಲ್ಲಾ ಮಟ್ಟದ ಹಾಗೂ ಪ್ರತಿ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಹಾಜರಿದ್ದು, ಸಾರ್ವಜನಿಕರಿಂದ ಸ್ವೀಕೃತವಾದ ಎಲ್ಲಾ ಅರ್ಜಿಗಳು/ ಮನವಿಗಳನ್ನು ಈಗಾಗಲೇ ಚಾಲ್ತಿಯಲ್ಲಿರುವ ಸಾರ್ವಜನಿಕ ಕುಂದು ಕೊರತೆ ನಿವಾರಣಾ ವ್ಯವಸ್ಥೆ IPGRS (Integrated Public Grievance Redressal System) ತಂತ್ರಾಂಶದಲ್ಲಿ ದಾಖಲಿಸುವುದು ಹಾಗೂ ಅರ್ಜಿಗಳ ವಿಲೇವಾರಿಯನ್ನು ನಿರ್ವಹಿಸುವುದು.

ಸಂಬಂಧಿಸಿದ ಅರ್ಜಿಗಳನ್ನು ಬಹಳ ಜಾಗೃತೆಯಿಂದ ಹಾಗೂ ಸಹಾನುಭೂತಿಯಿಂದ ಪರಿಶೀಲಿಸಿ ನಿಗದಿತ ಕಾಲಾವಧಿಯೊಳಗೆ ನಿಯಮಾನುಸಾರ ಪರಿಹಾರೋಪಾಯಗಳನ್ನು ಒದಗಿಸುವ ಕುರಿತು ಅಗತ್ಯ ಕ್ರಮ ವಹಿಸುವುದು ಹಾಗೂ ಮುಂದುವರೆದು ಪ್ರತಿ ಮಾಹೆಯಲ್ಲಿಯೂ ಜಿಲ್ಲಾ ಮಟ್ಟದಲ್ಲಿ ಸದರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳವುದು.

ಜಿಲ್ಲಾಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮ ತಮ್ಮ ಜಿಲ್ಲಾ ವ್ಯಾಪ್ತಿಯ ಒಂದು ತಾಲ್ಲೂಕನ್ನು ಆಯ್ಕೆ ಮಾಡಿಕೊಂಡು ತಾಲ್ಲೂಕು ಮಟ್ಟದಲ್ಲಿ ಜನತಾದರ್ಶನ ಕಾರ್ಯಕ್ರಮವನ್ನು ನಡೆಸಬೇಕೆಂದು ಸರ್ಕಾರ ಆದೇಶಿಸಲಾಗಿದೆ.

Ramesh Babu

Journalist

Recent Posts

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

16 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

17 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

22 hours ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

23 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

2 days ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

2 days ago