ಪಾರದರ್ಶಕ ವ್ಯವಸ್ಥೆ ತರುವ ಸಲುವಾಗಿ ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗೆ ಮೊಬೈಲ್ ಹಾಜರಾತಿ ಕಡ್ಡಾಯಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ನೂತನ ಹಾಜರಾತಿ ವ್ಯವಸ್ಥೆಗೆ ಆರೋಗ್ಯ ಇಲಾಖೆ ಅಧಿಕಾರಿ, ನೌಕರರು ಸಹಕರಿಸುವಂತೆ ನಾನು ಮನವಿ ಮಾಡುತ್ತೇನೆ. ಜುಲೈ 1 ಮೊಬೈಲ್ ಹಾಜರಾತಿ ಜಾರಿಗೆ ಬರಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸಿಗುವುದಿಲ್ಲ ಎಂಬ ಸಾರ್ವಜನಿಕರ ದೂರುಗಳು ಇನ್ಮುಂದೆ ಕಡಿಮೆಯಾಗಲಿವೆ ಎಂಬ ನಿರೀಕ್ಷೆ ನನಗಿದೆ ಎಂದು ಹೇಳಿದ್ದಾರೆ.