ದೊಡ್ಡಬೆಳವಂಗಲದಲ್ಲಿ ಫೆ.17ರಂದು ಕ್ರಿಕೆಟ್ ಪಂದ್ಯಾವಳಿ ವೇಳೆ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ಆರೋಪದ ಮೇಲೆ ಬೆಂಗಳೂರಿನ ಹಂದರಹಳ್ಳಿ ನಿವಾಸಿಗಳಾದ ಸೋಮಶೇಖರ್, ಮುನ್ನ ಹಾಗೂ ಒಬ್ಬ ಬಾಲಕ ಸೇರಿದಂತೆ ಮೂರು ಜನರನ್ನು ಬಂಧಿಸಿ ನಗರದ ನ್ಯಾಯಾಯಕ್ಕೆ ಹಾಜರುಪಡಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಮಾ.7ರವರೆಗೂ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಬಂಧಿತರ ಪೈಕಿ ಒಬ್ಬಾತ ಅಪ್ರಪ್ತನಾಗಿರುವ ಹಿನ್ನೆಲೆಯಲ್ಲಿ ರಿಮೆಂಡ್ ಹೋಂಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದೊಡ್ಡಬೆಳವಂಗಲದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅಪ್ರಾಪ್ತ ಬಾಲಕ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಫೆ.17 ರಂದು ದೊಡ್ಡಬೆಳವಂಗಲ ಗ್ರಾಮದಲ್ಲಿ ಕ್ರಿಕೆಟ್ ವಿಚಾರದಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಇಬ್ಬರು ಅಮಾಯಕ ಯುವಕರಿಗೆ ಹಾಡಹಗಲೇ ಚಾಕು ಇರಿದು ಹತ್ಯೆ ಮಾಡಲಾಗಿತ್ತು.
ಪ್ರಕರಣದಲ್ಲಿ ಭಾಗಿಯಾದ್ದ ಪ್ರಮುಖ ಆರೋಪಿಗಳಿಬ್ಬರನ್ನು ಫೆ.19ರಂದು ಕಾಲಿಗೆ ಗುಂಡು ಹಾರಿಸುವ ಮೂಲಕ ಬಂಧಿಸಲಾಗಿತ್ತು. ಫೆ.22ರಂದು ಒಬ್ಬ ಆರೋಪಿ ವಕೀಲರ ಮೂಲಕ ನ್ಯಾಯಾಲಯಕ್ಕೆ ಶರಣಾಗಿದ್ದ.
ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಬೆಂಗಳೂರಿನ ಹಂದರಹಳ್ಳಿ ನಿವಾಸಿಗಳಾದ ಸೋಮಶೇಖರ್, ಮುನ್ನಾ ಹಾಗೂ ಒಬ್ಬ ಬಾಲಕ ಸೇರಿ ಮೂರು ಜನರನ್ನು ಫೆ.25ರಂದು ಬಂಧಿಸಿ ನ್ಯಾಯಾಯಕ್ಕೆ ಹಾಜರುಪಡಿಸಲಾಗಿದೆ.
ಒಟ್ಟಾರೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೇರಿದೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಮಾ.7ರವರೆಗೂ ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ಬಂಧಿತರ ಪೈಕಿ ಒಬ್ಬಾತ ಅಪ್ರಾಪ್ತನಾಗಿರುವ ಹಿನ್ನೆಲೆಯಲ್ಲಿ ರಿಮೆಂಡ್ ಹೋಂಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.