ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ. ಈ ಕುರಿತು ಅವರು ಸಾಮಾಜಿ ಜಾಲತಾಣ ವೇದಿಕೆ ಟ್ರೂಥ್‌ನಲ್ಲಿ ತಿಳಿಸಿದ್ದಾರೆ.
ಖಮೇನಿ ಅವರ ಹತ್ಯೆಯಾಗಿದೆ ಎಂಬ ಇಸ್ರೇಲಿ ವರದಿಗಳ ಕುರಿತು ಇರಾನ್ ಸರ್ಕಾರದಿಂದ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ. ಅಲ್ಲಿನ ಮಾಧ್ಯಮಗಳು ಈ ವರದಿಯನ್ನು ನಿರಾಕರಿಸಿವೆ.
ಇಸ್ರೇಲಿ ಮಾಧ್ಯಮಗಳ ವರದಿ ಪ್ರಕಾರ, ಪ್ರಸ್ತುತ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಮೇನಿ ಅವರ ಮೃತದೇಹವೆಂದು ಹೇಳಲಾಗುತ್ತಿರುವ ಫೋಟೋವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ತೋರಿಸಲಾಗಿದೆ ಎಂದು ಕೆಲವು ಟಿವಿ ಮಾಧ್ಯಮಗಳು ತಿಳಿಸಿವೆ ಎಂದು ವರದಿಯಾಗಿದೆ.
ಆದರೆ, ಈ ಹೇಳಿಕೆಗಳಿಗೆ ಯಾವುದೇ ಸ್ವತಂತ್ರ ದೃಢೀಕರಣ ಲಭ್ಯವಾಗಿಲ್ಲ. ಇರಾನ್ ಸರ್ಕಾರವು ಈ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದು, ಖಮೇನಿ ಅವರು ಸುರಕ್ಷಿತವಾಗಿದ್ದು ಆರೋಗ್ಯವಾಗಿದ್ದಾರೆ ಎಂದು ಅಧಿಕೃತವಾಗಿ ತಿಳಿಸಿದೆ.
ಇರಾನ್‌ನ ಅಧ್ಯಕ್ಷ ಹಾಗೂ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರು ಸುರಕ್ಷಿತವಾಗಿದ್ದು ಆರೋಗ್ಯವಾಗಿದ್ದಾರೆ ಎಂದು ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಫೈ ಎಬಿಸಿ ನ್ಯೂಸ್‌ಗೆ ತಿಳಿಸಿದ್ದಾರೆ.
ಇರಾನ್‌ನ ಸರ್ಕಾರದ ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಆಡಳಿತದಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ ಎಂದು ಬಫೈ ಸ್ಪಷ್ಟಪಡಿಸಿದ್ದಾರೆ.
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…