ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲ ಖಮೇನಿ ಹತ್ಯೆ ವಿಚಾರ: ಖಮೇನಿ ಸುರಕ್ಷಿತ, ಆರೋಗ್ಯವಾಗಿದ್ದಾರೆ-  ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಫೈ

ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ. ಈ ಕುರಿತು ಅವರು ಸಾಮಾಜಿ ಜಾಲತಾಣ ವೇದಿಕೆ ಟ್ರೂಥ್‌ನಲ್ಲಿ ತಿಳಿಸಿದ್ದಾರೆ.

ಖಮೇನಿ ಅವರ ಹತ್ಯೆಯಾಗಿದೆ ಎಂಬ ಇಸ್ರೇಲಿ ವರದಿಗಳ ಕುರಿತು ಇರಾನ್ ಸರ್ಕಾರದಿಂದ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ. ಅಲ್ಲಿನ ಮಾಧ್ಯಮಗಳು ಈ ವರದಿಯನ್ನು ನಿರಾಕರಿಸಿವೆ.

ಇಸ್ರೇಲಿ ಮಾಧ್ಯಮಗಳ ವರದಿ ಪ್ರಕಾರ, ಪ್ರಸ್ತುತ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಮೇನಿ ಅವರ ಮೃತದೇಹವೆಂದು ಹೇಳಲಾಗುತ್ತಿರುವ ಫೋಟೋವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ತೋರಿಸಲಾಗಿದೆ ಎಂದು ಕೆಲವು ಟಿವಿ ಮಾಧ್ಯಮಗಳು ತಿಳಿಸಿವೆ ಎಂದು ವರದಿಯಾಗಿದೆ.

ಆದರೆ, ಈ ಹೇಳಿಕೆಗಳಿಗೆ ಯಾವುದೇ ಸ್ವತಂತ್ರ ದೃಢೀಕರಣ ಲಭ್ಯವಾಗಿಲ್ಲ. ಇರಾನ್‌ ಸರ್ಕಾರವು ಈ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದು, ಖಮೇನಿ ಅವರು ಸುರಕ್ಷಿತವಾಗಿದ್ದು ಆರೋಗ್ಯವಾಗಿದ್ದಾರೆ ಎಂದು ಅಧಿಕೃತವಾಗಿ ತಿಳಿಸಿದೆ.

ಇರಾನ್‌ನ ಅಧ್ಯಕ್ಷ ಹಾಗೂ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರು ಸುರಕ್ಷಿತವಾಗಿದ್ದು ಆರೋಗ್ಯವಾಗಿದ್ದಾರೆ ಎಂದು ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಫೈ ಎಬಿಸಿ ನ್ಯೂಸ್‌ಗೆ ತಿಳಿಸಿದ್ದಾರೆ.

ಇರಾನ್‌ನ ಸರ್ಕಾರದ ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಆಡಳಿತದಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ ಎಂದು ಬಫೈ ಸ್ಪಷ್ಟಪಡಿಸಿದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

2 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

5 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

7 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

8 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

9 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

13 hours ago