ದೊಡ್ಡಬಳ್ಳಾಪುರದ ನಗರ ಠಾಣೆ ಒಳಗೊಂಡಂತೆ ಗ್ರಾಮಾಂತರ, ದೊಡ್ಡಬೆಳವಂಗಲ, ಹೊಸಹಳ್ಳಿ ಠಾಣೆಗಳಲ್ಲಿ ಕರ್ತವ್ಯ ನಿರ್ವಹಣೆ ಮಾಡಿದ್ದ ಎಎಸ್ಐ ದೇವರಾಜು ಅವರು ಗುರುವಾರ ನಿವೃತ್ತರಾದರು. ನಿವೃತ್ತ ಅಧಿಕಾರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಸನ್ಮಾನಿಸಿ ಅಭಿನಂದನೆ ಸಲ್ಲಿಸಿ ಬೀಳ್ಕೊಟ್ಟರು.