ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ, ಡಿವೈಎಸ್ ಪಿ ಕಚೇರಿ ಮುಂಭಾಗ ನೇಕಾರ ಮಳಿಗೆ ಕಾಮಗಾರಿ ಶಂಕುಸ್ಥಾಪನೆಗೆ ಬುಧವಾರ ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ನೇರವೇರಿಸಿದರು.
ಮತ್ತೊಂದೆಡೆ ಶಿಷ್ಟಾಚಾರ ಪಾಲನೆ ಮಾಡದೇ ಕಾಂಗ್ರೆಸ್ ಜನಪ್ರತಿನಿಧಿಗಳಿಗೆ ನಮಗೆ ಆಹ್ವಾನವಿಲ್ಲವೆಂದು ಆರೋಪಿಸಿ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ನಿರತ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಧೀರಜ್ ಮುನಿರಾಜ್ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾ ನಿರತರ ನಡುವೆ ಮಾತಿನ ಚಕಮಕಿ ನಡೆಯಿತು.
ಪ್ರತಿಭಟನಾ ನಿರತ ಕಾಂಗ್ರೆಸ್ ಮುಖಂಡರನ್ನು ಡಿವೈಎಸ್ಪಿ ಪಾಂಡುರಂಗ ಅವರು ಸಮಸ್ಯೆ ಕೇಳಿ ಮಾತನಾಡಿಸುವ ವೇಳೆ ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಅವರು ಪ್ರಚೋದಾತ್ಮಕವಾಗಿ ಮಾತನಾಡಿರುವುದು ಕಂಡು ಬಂದಿದೆ.
ಇವತ್ತು ಯಾವುದಾದರೂ ಪ್ರಾಣ ಹೋಗುತ್ತೆ, ಇಲ್ಲವಾದಲ್ಲಿ ಬಳ್ಳಾರಿ ಘಟನೆಗಿಂತ ಹೆಚ್ಚಾಗುತ್ತೆ ಎಂದು ಡಿವೈಎಸ್ಪಿ ಪಾಂಡುರಂಗ, ಮಾಜಿ ಶಾಸಕ ವೆಂಕಟರಮಣಯ್ಯ ಮುಂದೆಯೇ ಮಾತನಾಡಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇಂತಹ ಪ್ರಚೋದನಾತ್ಮಕ ಮಾತುಗಳನ್ನಾಡಿರುವವರ ವಿರುದ್ಧ ಸಂಬಂಧಪಟ್ಟ ಇಲಾಖೆವರು ಕ್ರಮ ಜರುಗಿಸಬೇಕೆಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…
2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…
ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ಇಂದು (ಜ.25) ವೀರಭದ್ರಸ್ವಾಮಿ ಮತ್ತು ಪ್ರಸನ್ನ…
ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ…