‘ಇವ ನಮ್ಮವ ಇವ ನಮ್ಮವ ವಿಧೇಯಕ-2026’ ಉಭಯ ಸದನಗಳಲ್ಲಿ ಅಂಗೀಕಾರ

ರಾಜ್ಯದಲ್ಲಿ ಸಾಮಾಜಿಕ ಸಾಮರಸ್ಯವನ್ನು ಎತ್ತಿಹಿಡಿಯುವ ಮತ್ತು ಮರ್ಯಾದಾ ಹತ್ಯೆಯಂತಹ ಅಮಾನವೀಯ ಕೃತ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಹಾಗೂ ಮರ್ಯಾದೆ ಮತ್ತು ಸಂಪ್ರದಾಯದ ಹೆಸರಿನಲ್ಲಿ ಅಪರಾಧಗಳ ಪ್ರತಿಬಂಧಕ ಮತ್ತು ನಿಷೇಧ (ಇವ ನಮ್ಮವ ಇವ ನಮ್ಮವ) ವಿಧೇಯಕ-2026 ಅನ್ನು ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಿ, ಅಂಗೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಂತರ್ಜಾತಿ ವಿವಾಹಗಳ ಮೂಲಕ ಅವರ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ತಮ್ಮ ಸಾಂವಿಧಾನಿಕ ಹಕ್ಕನ್ನು ಚಲಾಯಿಸುವವರ, ವಿಶೇಷವಾಗಿ ಯುವ ವಯಸ್ಕರ ವಿರುದ್ಧ ಮರ್ಯಾದೆಗೇಡು ಹತ್ಯೆಗಳನ್ನು ಒಳಗೊಂಡಂತೆ ಕ್ರೂರ ಸ್ವರೂಪದ ಹಿಂಸಾಚಾರಗಳು ವ್ಯಕ್ತವಾಗುತ್ತಿರುವುದು ಮುಂದುವರಿಯುತ್ತಿದ್ದು, ಕೊಲೆ, ಹಲ್ಲೆ, ಜೀವಂತ ಹೆಣ್ಣುಮಕ್ಕಳಿಗೆ ಮರಣದ ಆಚರಣೆಗಳನ್ನು (ತಿಥಿ) ಮಾಡುವುದು, ಕಾನೂನುಬದ್ಧ ಪಿತ್ರಾರ್ಜಿತ ಹಕ್ಕುಗಳನ್ನು ನಿರಾಕರಿಸುವುದು, ಸಾಮಾಜಿಕ ಬಹಿಷ್ಕಾರ, ವಿಷಪ್ರಾಶನದ ಮೂಲಕ ಅಥವಾ ಇತರ ನಿಗೂಢ ವಿಧಾನಗಳ ಮೂಲಕ ಹಾನಿಯನ್ನುಂಟು ಮಾಡುವುದು ಹೀಗೆ ಎಲ್ಲಾ ವಿಧದ ಅಮಾನವೀಯ ಕೃತ್ಯಗಳ ವಿರುದ್ಧ ಕಾನೂನಾತ್ಮಕ ರಕ್ಷಣೆ ದೊರಕಲಿದೆ ಎಂದರು.

​ಬಸವಾದಿ ಶರಣರು ಕಾಣಬಯಸಿದ ಸಮಸಮಾಜ ನಿರ್ಮಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದ್ದು, “ಇವ ನಮ್ಮವ ಇವ ನಮ್ಮವ” ಮಸೂದೆಯ ಮೂಲಕ ಸಾಮಾಜಿಕ ಪರಿವರ್ತನೆಗೆ ಹೊಸ ವೇಗ ನೀಡಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

2 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

6 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

9 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

20 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

1 day ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

1 day ago