ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯವಾಗಿದ್ದು, ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೆ. ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.
ಗಂಗಾವತಿ ತಾಲ್ಲೂಕಿನ ಪ್ರವಾಸಿ ತಾಣ ಸಾಣಾಪುರ ಕೆರೆ ಬಳಿ ಜಂಗ್ಲಿಗೆ ತೆರಳುವ ಮಾರ್ಗದಲ್ಲಿ ಗುರುವಾರ ರಾತ್ರಿ ತುಂಗಭದ್ರಾ ಎಡದಂಡೆ ಕಾಲುವೆ ಪಕ್ಕ ಗಿಟಾರ್ ಬಾರಿಸುತ್ತ ಕುಳಿತಿದ್ದ ಐವರು ಪ್ರವಾಸಿಗರ ಪೈಕಿ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಸ್ರೇಲ್‌ನ 27 ವರ್ಷದ ಪ್ರವಾಸಿ ಮಹಿಳೆ ಮತ್ತು 29 ವರ್ಷದ ಸ್ಥಳೀಯ ಹೋಮ್ ಸ್ಟೇ ಒಡತಿ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇನ್ನುಳಿದ ಮೂವರು ಪ್ರವಾಸಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಅದರಲ್ಲಿ ಒಡಿಶಾದ ಪ್ರವಾಸಿಗನನ್ನು ಕಾಲುವೆಗೆ ಎಸೆಯಲಾಗಿದ್ದು, ಆತನ ಪತ್ತೆಗಾಗಿ ಶೋಧ ಮುಂದುವರಿದಿದೆ. ನಾಲ್ಕು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಂಡಿದ್ದಾರೆ.
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…
ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್…
ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…