Categories: ಕೊಪ್ಪಳ

ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಪ್ರಕರಣ: ಇದು ಅತ್ಯಂತ ಹೇಯ ಕೃತ್ಯ- ಇಂತಹ ಘಟನೆ ಮರುಕಳಿಸದಂತೆ ಅಗತ್ಯ ಕ್ರಮ ವಹಿಸಲಾಗುವುದು- ಸಿಎಂ ಸಿದ್ದರಾಮಯ್ಯ

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯವಾಗಿದ್ದು, ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೆ. ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

ಗಂಗಾವತಿ ತಾಲ್ಲೂಕಿನ ಪ್ರವಾಸಿ ತಾಣ ಸಾಣಾಪುರ ಕೆರೆ ಬಳಿ ಜಂಗ್ಲಿಗೆ ತೆರಳುವ ಮಾರ್ಗದಲ್ಲಿ ಗುರುವಾರ ರಾತ್ರಿ ತುಂಗಭದ್ರಾ ಎಡದಂಡೆ ಕಾಲುವೆ ಪಕ್ಕ ಗಿಟಾರ್ ಬಾರಿಸುತ್ತ ಕುಳಿತಿದ್ದ ಐವರು ಪ್ರವಾಸಿಗರ ಪೈಕಿ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಇಲ್ಲಿನ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಸ್ರೇಲ್‌ನ 27 ವರ್ಷದ ಪ್ರವಾಸಿ ಮಹಿಳೆ ಮತ್ತು 29 ವರ್ಷದ ಸ್ಥಳೀಯ ಹೋಮ್‌ ಸ್ಟೇ ಒಡತಿ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇನ್ನುಳಿದ ಮೂವರು ಪ್ರವಾಸಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಅದರಲ್ಲಿ ಒಡಿಶಾದ ಪ್ರವಾಸಿಗನನ್ನು ಕಾಲುವೆಗೆ ಎಸೆಯಲಾಗಿದ್ದು, ಆತನ ಪತ್ತೆಗಾಗಿ ಶೋಧ ಮುಂದುವರಿದಿದೆ. ನಾಲ್ಕು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಂಡಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

10 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

20 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago