ಇ-ಶ್ರಮ್ ಪೋರ್ಟಲ್‌ನಲ್ಲಿ ಸಂಘಟಿತ/ ಅಸಂಘಟಿತ ನೇಕಾರರು ನೋಂದಾಯಿಸಲು ಅವಕಾಶ

ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲು ಇ-ಶ್ರಮ್ ಪೋರ್ಟಲ್‌ನ್ನು ಅಭಿವೃದ್ಧಿಪಡಿಸಿದ್ದು, ಸುಮಾರು 379 ವರ್ಗಗಳ ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಪೋರ್ಟಲ್ ಮೂಲಕ ಉಚಿತವಾಗಿ ನೋಂದಾಯಿಸಲಾಗುತ್ತಿದ್ದು, ಗುರುತಿನ ಚೀಟಿಯನ್ನು ನೋಂದಾಯಿತ ಸ್ಥಳದಲ್ಲಿ ವಿತರಿಸಲಾಗುತ್ತಿದೆ.

ಅದರಂತೆ ಕೈಮಗ್ಗ ಮತ್ತು ವಿದ್ಯುತ್‌ಮಗ್ಗ ನೇಕಾರರು, ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರು ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಾಯಿಸಿ. ಜಿಲ್ಲೆಯಲ್ಲಿ ಕೈಮಗ್ಗ ಮತ್ತು ವಿದ್ಯುತ್‌ಮಗ್ಗ ನೇಕಾರರು, ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರು ಸ್ಥಳಿಯ ಗ್ರಾಮ-ಒನ್, ಕರ್ನಾಟಕ-ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಹಾಗೂ ಇತರೆ ಸರ್ಕಾರದ ಸೇವಾ ಕೇಂದ್ರಗಳಲ್ಲಿ ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಾಯಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಸರ್ಕಾರದ ಸೌಲಭ್ಯವನ್ನು ಪಡೆಯಲು ಅನುಕೂಲವಾಗುವಂತೆ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ/ ತಾಲ್ಲೂಕಿನ ಸಂಘಟಿತ ಹಾಗೂ ಅಸಂಘಟಿತ ನೇಕಾರರು ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಾಯಿಸಲು ಕೋರಿದೆ.

ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ-561203 ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಕಚೇರಿಯ ಸಮಯದಲ್ಲಿ ಖುದ್ದು ಭೇಟಿ ನೀಡಿ ಸಂಪರ್ಕಿಸಬಹುದಾಗಿದೆ‌‌ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *