ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲು ಇ-ಶ್ರಮ್ ಪೋರ್ಟಲ್‌ನ್ನು ಅಭಿವೃದ್ಧಿಪಡಿಸಿದ್ದು, ಸುಮಾರು 379 ವರ್ಗಗಳ ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಪೋರ್ಟಲ್ ಮೂಲಕ ಉಚಿತವಾಗಿ ನೋಂದಾಯಿಸಲಾಗುತ್ತಿದ್ದು, ಗುರುತಿನ ಚೀಟಿಯನ್ನು ನೋಂದಾಯಿತ ಸ್ಥಳದಲ್ಲಿ ವಿತರಿಸಲಾಗುತ್ತಿದೆ.
ಅದರಂತೆ ಕೈಮಗ್ಗ ಮತ್ತು ವಿದ್ಯುತ್‌ಮಗ್ಗ ನೇಕಾರರು, ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರು ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಾಯಿಸಿ. ಜಿಲ್ಲೆಯಲ್ಲಿ ಕೈಮಗ್ಗ ಮತ್ತು ವಿದ್ಯುತ್‌ಮಗ್ಗ ನೇಕಾರರು, ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರು ಸ್ಥಳಿಯ ಗ್ರಾಮ-ಒನ್, ಕರ್ನಾಟಕ-ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಹಾಗೂ ಇತರೆ ಸರ್ಕಾರದ ಸೇವಾ ಕೇಂದ್ರಗಳಲ್ಲಿ ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಾಯಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಸರ್ಕಾರದ ಸೌಲಭ್ಯವನ್ನು ಪಡೆಯಲು ಅನುಕೂಲವಾಗುವಂತೆ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ/ ತಾಲ್ಲೂಕಿನ ಸಂಘಟಿತ ಹಾಗೂ ಅಸಂಘಟಿತ ನೇಕಾರರು ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಾಯಿಸಲು ಕೋರಿದೆ.
ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ-561203 ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಕಚೇರಿಯ ಸಮಯದಲ್ಲಿ ಖುದ್ದು ಭೇಟಿ ನೀಡಿ ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…