ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ ಅಡಿಯಲ್ಲಿನ ನಾಗರಿಕ ಸೇವೆಗಳ ವಿದ್ಯುನ್ಮಾನ ವಿತರಣಾ ನಿರ್ದೇಶನಾಲಯ (ಇಡಿಸಿಎಸ್) ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ. ಇನ್ನು ಮುಂದೆ ನಾಗರಿಕರು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರಗಳ ಮೂಲಕವೂ ಇ-ಸ್ವತ್ತು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಒಪ್ಪಂದವು 3 ವರ್ಷಗಳ ಅವಧಿಗೆ ಚಾಲ್ತಿಯಲ್ಲಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಸ್ವತ್ತು ವ್ಯವಸ್ಥೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ ಸೇವೆ ಇನ್ನು ಮುಂದೆ ರಾಜ್ಯದಾದ್ಯಂತ ಇರುವ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.
ಕೇಂದ್ರಗಳ ನಿರ್ವಾಹಕರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಇ-ಸ್ವತ್ತು ವ್ಯವಸ್ಥೆಯ ಬಗ್ಗೆ ಅಗತ್ಯ ತರಬೇತಿ ನೀಡಲಾಗುವುದು ಹಾಗೂ ನಿರ್ವಾಹಕರಿಗೆ ಪ್ರತ್ಯೇಕ ಲಾಗಿನ್ ಖಾತೆಗಳನ್ನು ಇಲಾಖೆ ರಚಿಸಿಕೊಡಲಾಗುವುದು. ಸೇವೆಗಳ ಸಮನ್ವಯಕ್ಕಾಗಿ ಇಲಾಖೆ ವತಿಯಿಂದ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದಿದ್ದಾರೆ.
ಹೊಸ ಖಾತಾ ಸೇವೆಗೆ 45 ರೂ. ಶುಲ್ಕ ನಿಗದಿಪಡಿಸಿದ್ದು ಈ ವೆಚ್ಚವನ್ನು ನಾಗರಿಕರೇ ಭರಿಸಬೇಕು. ಇ-ಆಸ್ತಿ ಅರ್ಜಿಗೆ ಬೇಕಾದ ದಾಖಲೆಗಳ ಸ್ಕ್ಯಾನಿಂಗ್ ಮತ್ತು ಅಪ್‌ಲೋಡ್ ಮಾಡಲು ಪ್ರತಿ ಪುಟಕ್ಕೆ 5 ರೂ. ಪಾವತಿಸಬೇಕಾಗುವುದು. ಎಲ್ಲ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳು ವರ್ಷದ ಎಲ್ಲ ದಿನಗಳು ಬೆಳಿಗ್ಗೆ 8 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಕಾರ್ಯನಿರ್ವಹಿಸಲಿವೆ. ಸ್ವಾತಂತ್ರ್ಯ ದಿನ, ಗಣರಾಜ್ಯೋತ್ಸವ, ಕಾರ್ಮಿಕರ ದಿನ, ಗಾಂಧಿ ಜಯಂತಿ, ಕನ್ನಡ ರಾಜ್ಯೋತ್ಸವ ಮತ್ತು ಮತದಾನದ ದಿನಗಳಂದು ಈ ಕೇಂದ್ರಗಳಿಗೆ ರಜೆ ಇರುತ್ತದೆ ಎಂದು ತಿಳಿಸಿದ್ದಾರೆ
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…
ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…