ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹಾದ್ರೀಪುರ ಗ್ರಾಮ ಪಂಚಾಯತಿ ಪಿಡಿಒ ಇ ಸ್ವತ್ತು ನೀಡಲು ಲಂಚ ಪಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಶಿವಾನಂದ ಮರಿಕೇರಿ ಲಂಚ ಪಡೆದ ಹಾದ್ರೀಪುರ ಗ್ರಾಮ ಪಂಚಾಯತಿ ಪಿಡಿಒ.
ಲಂಚ ಸ್ವೀಕರಿಸಿರುವುದನ್ನು ಒಪ್ಪಿಕೊಂಡು ತಪ್ಪಾಯ್ತು ಎಂದು ಕ್ಷಮೆ ಕೇಳಿರುವ ವಿಡಿಯೋ ಫುಲ್ ವೈರಲ್ ಆಗಿದೆ.
ವರ್ಗಾವಣೆ ಆಗಿದ್ದೇನೆ ಕೂಡಲೇ ಇ ಸ್ವತ್ತು ತೆಗೆದುಕೊಂಡು ಹೋಗಿ ಎಂದು ಹಣಕ್ಕೆ ಬೇಡಿಕೆ ಇಟ್ಟು, 10 ಸಾವಿರ ಹಣವನ್ನ ಸ್ನೇಹಿತನಿಗೆ ಫೋನ್ ಪೇ ಮಾಡಿಸಿಕೊಂಡಿರುವುದಾಗಿ ತಿಳಿದುಬಂದಿದೆ.
ಸಾಕ್ಷಿ ಸಮೇತ ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಪಿಡಿಒ ಅವರಿಗೆ ಪ್ರಶ್ನೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಪಿಡಿಒ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾರೆ.
ಈ ಹಿಂದೆಯೂ ಕೂಡ ಪಿಡಿಒ ವಿರುದ್ಧ ಸಾಕಷ್ಟು ಲಂಚದ ಆರೋಪಗಳು ಕೇಳಿಬಂದಿದ್ದವು. ಈ ಕುರಿತು ಶಾಸಕ ಧೀರಜ್ ಮುನಿರಾಜ್ ಅವರ ಗಮನಕ್ಕೆ ಬಂದಿತ್ತು. ಶಾಸಕರು ಈ ಪಿಡಿಒ ಅವರಿಗೆ ವಾರ್ನ್ ಕೂಡ ಮಾಡಿದ್ದರು. ಇಷ್ಟಾದರೂ ಬುದ್ಧಿ ಕಲಿಯದ ಈ ಪಿಡಿಒ ಮತ್ತೆ ಲಂಚದ ಹುತ್ತಕ್ಕೆ ಕೈಹಾಕುತ್ತಲೇ ಬಂದಿದ್ದಾರೆ. ಇಷ್ಟೆಲ್ಲಾ ಆರೋಪಗಳು ಈ ಪಿಡಿಒ ಅವರ ಮೇಲೆ ಇದ್ದರೂ ಜಿಲ್ಲಾ ಪಂಚಾಯಿತಿ ಸಿಇಒ ಮತ್ತು ತಾ.ಪಂ ಇಒ ಯಾವುದೇ ಕ್ರಮಕ್ಕೆ ಮುಂದಾಗದೇ ಇರುವುದು ಖೇದಕರ ವಿಷಯ ಎಂದು ಸ್ಥಳೀಯರು ಆರೋಪಿಸಿದ್ದಾರೆ…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…