ಈ ಬಾರಿಯ ಬಜೆಟ್ ವಿಕಸಿತ ಭಾರತದ ಪರಿಕಲ್ಪನೆಗೆ ಪೂರಕವಾಗಿದೆ. ಆರ್ಥಿಕ ಅಭಿವೃದ್ಧಿ ಮತ್ತು ಜನಕಲ್ಯಾಣದ ಸಮತೋಲನ ಸಾಧಿಸಿದೆ.ಅಭಿವೃದ್ಧಿ ಗುರಿಯೊಂದಿಗೆ ಹಾಗೂ ಜನಸಾಮಾನ್ಯರ ಮೇಲೆ ತೆರಿಗೆ ಹೊರೆ ಇಲ್ಲದ, ಸಮತೋಲಿತವಾಗಿದೆ ಬಿಜೆಪಿ ಮುಖಂಡ ಸತೀಶ್ ಹೇಳಿದ್ದಾರೆ.
ಈ ಬಜೆಟ್ ಯುವಜನತೆ, ಮಹಿಳೆಯರು, ರೈತರು ಸೇರಿದಂತೆ ಎಲ್ಲ ವರ್ಗದ ಆಶೋತ್ತರಗಳಿಗೆ ಸ್ಪಂದಿಸಿದೆ. ಕೃಷಿ ಕ್ಷೇತ್ರದ ಸಮಗ್ರ ಪ್ರಗತಿಯ ದೃಷ್ಟಿಯಿಂದ ಹಲವು ಯೋಜನೆಗಳನ್ನು ತರಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ 500 ಕಂಪನಿಗಳಲ್ಲಿ 1 ಕೋಟಿ ಯುವಜನರಿಗೆ 12 ತಿಂಗಳ ಇಂಟರ್ನ್ಶಿಪ್ ಅವಕಾಶ, ಮೊದಲ ಬಾರಿಗೆ ಉದ್ಯೋಗಕ್ಕೆ ಸೇರಿದವರಿಗೆ 1 ತಿಂಗಳ ವೇತನದಂತಹ ಕ್ರಮಗಳು ಯುವಜನರಿಗೆ ಹೊಸ ಆಶಾಕಿರಣವನ್ನು ನೀಡಿದೆ ಎಂದರು.
ಮಹಿಳಾ ಉದ್ಯೋಗಿಗಳಿಗೆ ಸುಭದ್ರತೆ ಒದಗಿಸಲು ವಸತಿ ನಿಲಯಗಳನ್ನು ಆರಂಭಿಸುವುದಾಗಿ ಬಜೆಟ್ನಲ್ಲಿ ಹೇಳಿರುವುದು ಕೂಡ ಶ್ಲಾಘನೀಯವಾಗಿದ್ದು, ಔದ್ಯೋಗಿಕವಾಗಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಲಿದೆ ಎಂದು ಹೇಳಿದ್ದಾರೆ.