ದೇಶದ ಪ್ರಪ್ರಥಮ ಗೃಹ ಸಚಿವ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಶುಕ್ರವಾರ ‘ಏಕತಾ ನಡಿಗೆ’ ಓಟ ನಡೆಯಿತು.
ತಾಲೂಕಿನ ಗೀತಂ ಯೂನಿವರ್ಸಿಟಿಯಲ್ಲಿ ಏಕತಾ ನಡಿಗೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಅವರು ಪ್ರಮಾಣ ವಚನ ಬೋಧಿಸಿ, ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.
ಬಳಿಕ ಪೊಲೀಸರು, ಎನ್.ಸಿ.ಸಿ ಕೆಡೆಟ್ ಗಳು, ವಿದ್ಯಾರ್ಥಿಗಳು, ಸ್ಕೌಟ್ಸ್ ಹಾಗೂ ಗೈಡ್ಸ್ ವಿದ್ಯಾರ್ಥಿಗಳು, ಸಾರ್ವಜನಿಕರು ಏಕತಾ ನಡಿಗೆಯಲ್ಲಿ ಹೆಜ್ಜೆ ಹಾಕಿದರು.
ಗೀತಂ ಯೂನಿವರ್ಸಿಟಿಯಿಂದ ಆರಂಭವಾದ ನಡಿಗೆಯು ನಾಗದೇನಹಳ್ಳಿ ತಲುಪಿ ನಡಿಗೆ ಸಂಪನ್ನಗೊಂಡಿತು.
ಈ ವೇಳೆ ಎಎಸ್ಪಿ ನಾಗರಾಜು, ಡಿವೈಎಸ್ಪಿ ರವಿ.ಪಿ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ, ಮಹಿಳಾ ಠಾಣಾ ಇನ್ಸ್ ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ, ಪೊಲೀಸ್ ಚಂದ್ರಶೇಖರ್, ಗೀತಂ ಯೂನಿವರ್ಸಿಟಿ ಆಡಳಿತ ಮಂಡಳಿ, ಸಿಬ್ಬಂದಿ, ಉಪನ್ಯಾಸಕರು ವಿವಿಧ ಠಾಣೆಗಳ ಪೊಲೀಸರು, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…
ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್…
ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…