ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು ದೊಡ್ಡಬಳ್ಳಾಪುರ ನಗರದ ದರ್ಗಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಆಯೋಜನೆ ಮಾಡಲಾಗಿತ್ತು.

ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ನಗರಸಭಾ ಉಪಾಧ್ಯಕ್ಷ ಎಂ ಮಲ್ಲೇಶ್, ರೋಗಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು, ಗಂಭೀರ ಆರೋಗ್ಯ ಸಮಸ್ಯೆಗಳನ್ನು ತಡೆಯಲು ಮತ್ತು ಚಿಕಿತ್ಸೆಯ ವೆಚ್ಚವನ್ನು ಕಡಿಮೆ ಮಾಡಲು ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಅತ್ಯಗತ್ಯ. ಬಡವರು ಒಳ್ಳೆಯ ಆಸ್ಪತ್ರೆಗಳಿಗೆ ಹೋಗಿ ಆರೋಗ್ಯ ತಪಾಸಣೆ ಮಾಡಿಸಲು ಅಸಾಧ್ಯ. ಅದ್ದರಿಂದ ಇಂತಹ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡುವುದರಿಂದ ಬಡ ಕೂಲಿ ಕಾರ್ಮಿಕ ವರ್ಗದವರಿಗೆ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದರು.

ಇದು ಕೊಲೆಸ್ಟ್ರಾಲ್, ರಕ್ತದ ಸಕ್ಕರೆ, ಬಿಪಿ, ಮತ್ತು ಕ್ಯಾನ್ಸರ್‌ ನಂತಹ ರೋಗಗಳ ಮುನ್ನೆಚ್ಚರಿಕೆ ವಹಿಸಲು, ಹಾಗೆಯೇ ಸರಿಯಾದ ಜೀವನಶೈಲಿ ಅಳವಡಿಸಿಕೊಳ್ಳಲು ವೈದ್ಯರ ಮಾರ್ಗದರ್ಶನ ಪಡೆಯಲು ಸಹಾಯ ಮಾಡುತ್ತದೆ.

ದೊಡ್ಡಬಳ್ಳಾಪುರ ನಗರದ ಹೃದಯ ಭಾಗವಾದ ಖಾಸಬಾಗ್ ದರ್ಗಾಪುರ, ರಂಗಪ್ಪ ಸರ್ಕಲ್ ಈ ಭಾಗದಲ್ಲಿ ಹೆಚ್ಚು ಬಡ ಕುಟಂಬಗಳು ಇದ್ದು, ದಿನ ನಿತ್ಯದ ದುಡಿಮೆ ಊಟ ಬಟ್ಟೆಗೆ ಸಾಲುವುದಿಲ್ಲ ಅದರೆ ಅರೋಗ್ಯ ತಪಾಸಣೆ ಇನ್ನೂ ಯಾವರೀತಿ ಮಾಡುತ್ತಾರೆ ಅದರಿಂದ ನವಚೇತನ ಆಸ್ಪತ್ರೆ  ಉಷ್ಟ್ರತಿ ಎನ್‌ ಜಿ ಓ, ಡಿ ಎಸ್‌ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಅಯೋಜಿಸಲಾಗಿದೆ ಎಂದರು.

ಆರೋಗ್ಯವೇ ಭಾಗ್ಯ. ಉತ್ತಮ ಆರೋಗ್ಯವು ದೈಹಿಕ, ಮಾನಸಿಕವಾಗಿ ಸದೃಢವಾಗಿರುವ ಸ್ಥಿತಿಯಾಗಿದ್ದು, ಸಂತೋಷದ ಮತ್ತು ಯಶಸ್ವಿ ಜೀವನಕ್ಕೆ ಅಡಿಪಾಯವಾಗಿದೆ. ಇದು ಕಾಯಿಲೆಗಳನ್ನು ತಡೆಗಟ್ಟಲು, ಜೀವನದ ಗುಣಮಟ್ಟವನ್ನು ಹೆಚ್ಚಿಸಲು, ದೈನಂದಿನ ಕಾರ್ಯಕ್ಷಮತೆ ಹೆಚ್ಚಿಸಲು ಮತ್ತು ಒತ್ತಡವನ್ನು ಕಡಿಮೆ ಮಾಡಲು ನಿರ್ಣಾಯಕವಾಗಿದೆ. ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ, ದೇಹದ ದೃಢವಾಗಿರುತ್ತೆ ಎಂದರು.

ಈ ಸಂದರ್ಭದಲ್ಲಿ ನವಚೇತನ ಆಸ್ಪತ್ರೆಯ ಎಂಡಿ ಡಾ.ರಾಜೇಶ್, ನೇತ್ರ ತಜ್ಞ ಡಾ.ವೈ.ಗಿರೀಶ್, ನಿರ್ದೇಶಕರಾದ ಪ್ರಕಾಶ್, ಮಾರ್ಕೆಟಿಂಗ್ ವಿಭಾಗದ ಮೊಹಮ್ಮದ್ ರಫೀ, ಆನಂದ್ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

1 hour ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

14 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

14 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

15 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

22 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

23 hours ago