ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿರಿಗಾಗಿ 30 ದಿನಗಳ ಕಾಲಾವಧಿಯ ಉಚಿತ ಎಂಬ್ರಾಯಡರಿ (ಆರಿ ವಕ್೯) ತರಬೇತಿ ಹಮ್ಮಿಕೊಳ್ಳಲಾಗಿದೆ.
ಆಸಕ್ತ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರು 2024 ಮಾಚ್೯ 11 ಸೋಮವಾರದಂದು ಸಂಸ್ಥೆಯಲ್ಲಿ ನಡೆಯುವ ತರಬೇತಿಯಲ್ಲಿ ನೇರವಾಗಿ ಪಡಿತರ ಚೀಟಿ, ಆಧಾರ್ ಕಾರ್ಡ್, 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಬಹುದು.
ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತವಾಗಿ ತರಬೇತಿ, ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಭೋದನೆ ಮಾಡಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.
ಗ್ರಾಮೀಣ ಭಾಗದ ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಕೇವಲ 35 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊ. 9591514154, 8970476050, 8970446644, 9535774621 ಸಂಪರ್ಕಿಸಬಹುದಾಗಿದೆ.
ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…