ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿರಿಗಾಗಿ 30 ದಿನಗಳ ಕಾಲಾವಧಿಯ ಉಚಿತ ಎಂಬ್ರಾಯಡರಿ (ಆರಿ ವಕ್೯) ತರಬೇತಿ ಹಮ್ಮಿಕೊಳ್ಳಲಾಗಿದೆ.
ಆಸಕ್ತ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರು ಡಿಸೆಂಬರ್ 02ರ ಶನಿವಾರದಂದು ತರಬೇತಿ ಸಂಸ್ಥೆಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಡಿತರ ಚೀಟಿ, ಆಧಾರ್ ಕಾರ್ಡ್, 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಬಹುದು.
ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತವಾಗಿ ತರಬೇತಿ, ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಬೋಧನೆ ಮಾಡಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.
ಗ್ರಾಮೀಣ ಭಾಗದ ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಕೇವಲ 35 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊ. 9591514154, 8970476050, 8970446644, 9535774621 ಸಂಪರ್ಕಿಸಬಹುದಾಗಿದೆ.
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…