ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗೆ ಹಾಗೂ ಮಹಿಳೆಯರಿಗಾಗಿ 30 ದಿನಗಳ ಕಾಲಾವಧಿಯ ಉಚಿತ ಎಂಬ್ರಾಯ್ಡರಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರು 03-02-2025 ಸೋಮವಾರದಿಂದ ಉಚಿತ ಎಂಬ್ರಾಯ್ಡರಿ ತರಬೇತಿ ನಡೆಯುತ್ತಿದ್ದು ಆಸಕ್ತರು ಪಡಿತರ ಚೀಟಿ, ಆಧಾರ್ ಕಾರ್ಡ್, 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಬಹುದು.
ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತವಾಗಿ ತರಬೇತಿ, ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಭೋದನೆ ಮಾಡಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.
ಗ್ರಾಮೀಣ ಭಾಗದ ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಕೇವಲ 35 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊ. 9591514154, 8970476050, 8970446644 ಸಂಪರ್ಕಿಸಬಹುದಾಗಿದೆ.
*ವಿಶೇಷ ಸೂಚನೆ:- ಹೊಸಕೋಟೆಯಿಂದ ತರಬೇತಿ ಸಂಸ್ಥೆಗೆ, ತರಬೇತಿಗೆ ಬರಲು BMTC ಬಸ್ ವ್ಯವಸ್ಥೆ ಇದೆ.*
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…