ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕಂಪ್ಯೂಟರ್ ಡಿಟಿಪಿ, ಗ್ರಾಫಿಕ್ ಡಿಸೈನಿಂಗ್ ಕುರಿತ 45 ದಿನಗಳ ಉಚಿತ ತರಬೇತಿಯು ಜುಲೈ 10 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆಯೊಂದಿಗೆ ಆಂಗ್ಲ ಭಾಷೆಯನ್ನು ಸಹ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…