ಉಚಿತ ಕಂಪ್ಯೂಟರ್ ಡಿಟಿಪಿ, ಗ್ರಾಫಿಕ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕಂಪ್ಯೂಟರ್ ಡಿಟಿಪಿ, ಗ್ರಾಫಿಕ್ ಡಿಸೈನಿಂಗ್ ಕುರಿತ 45 ದಿನಗಳ ಉಚಿತ ತರಬೇತಿಯು ಜುಲೈ 10 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆಯೊಂದಿಗೆ ಆಂಗ್ಲ ಭಾಷೆಯನ್ನು ಸಹ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

31 minutes ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

15 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

20 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

23 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago