ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ-ಮಹಿಳೆಯರಿಗಾಗಿ 30 ದಿನಗಳ ಕಾಲಾವಧಿಯ ಉಚಿತ ಲಘು ವಾಹನ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತಕರು 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರು 04-11-2024 ರಂದು ಸೋಮವಾರ ಸಂಸ್ಥೆಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಡಿತರ ಚೀಟಿ, ಆಧಾರ್ ಕಾರ್ಡ್, 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಬಹುದು.
ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತವಾಗಿ ತರಬೇತಿ, ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಭೋದನೆ ಮಾಡಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.
ಗ್ರಾಮೀಣ ಭಾಗದ ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಕೇವಲ 35 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊ. 9591514154, 8970476050, 8970446644. ಸಂಪರ್ಕಿಸಬಹುದಾಗಿದೆ.
ಡ್ರಿಂಕ್ & ಡ್ರೈವ್ ಪ್ರಕರಣ ಪರಿಶೀಲನೆ ವೇಳೆ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿರುವ ಘಟನೆ ಬೆಂಗಳೂರು…
ಕಾಳು ಮಾತ್ರೆ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಸುಮಾರು 2 ಗಂಟೆಯಲ್ಲಿ ದೊಡ್ಡಬಳ್ಳಾಪುರ ಹೊರಹೊಲಯದಲ್ಲಿರುವ ಹೊಸಹುಡ್ಯ ಗ್ರಾಮದಲ್ಲಿ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದಲ್ಲಿ ಗ್ರಾಮಾಂತರ ಠಾಣಯಲ್ಲಿ ಜ್ಯೂಯಲರಿ ಶಾಪ್ ಮಾಲೀಕರುಗಳಿಗೆ, ಜ್ಯೂಯಲರಿ…
ಹೊಸ ವರ್ಷದ ಸ್ವಾಗತಕ್ಕೆ ಇಡೀ ರಾಜ್ಯವೇ ಸಜ್ಜಾಗುತ್ತಿದೆ. ಇತ್ತ ಹೊಸ ವರ್ಷದ ಆಚರಣೆ ನೆಪದಲ್ಲಿ ನಡೆಯುವ ಮೋಜು-ಮಸ್ತಿ, ಅನಾಹುತ ತಪ್ಪಿಸಿ,…
ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…
1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…