ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೃತಕ ಆಭರಣ ತಯಾರಿಕ ಕುರಿತ 13 ದಿನಗಳ ಉಚಿತ ತರಬೇತಿಯು 25 ಮಾರ್ಚ್ 2024 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮಾರ್ಚ್ 20 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9241482541, 8884554510, 9740982585, 9380162042, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…