ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ ಕುರಿತ 10 ದಿನಗಳ ಉಚಿತ ತರಬೇತಿಯು ಅರ್ಜಿ ಆಹ್ವಾನಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ನಗರದ ಪ್ರತಿಷ್ಠಿತ ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಸಂವಿಧಾನ…
12ನೇ ಶತಮಾನದ ಸಮಾಜ ಸುಧಾರಕ, ಸಮಾನತೆ ಮತ್ತು ಮಾನವೀಯ ಮೌಲ್ಯಗಳ ಪ್ರತಿಪಾದಕರಾದ ವಿಶ್ವಗುರು ಬಸವಣ್ಣನವರ ಕುರಿತು ‘ಬಸವ ಮಂಟಪ’ ಕೃತಿಯಲ್ಲಿ…
ದೊಡ್ಡಬಳ್ಳಾಪುರ: ತಾಲೂಕಿನ 220/66/11 ಕೆ.ವಿ. ಕೆಐಎಡಿಬಿ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 29ರ ಭಾನುವಾರ…
ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನವು ಕೇವಲ ಆಡಳಿತ ನಡೆಸುವ ಪುಸ್ತಕವಲ್ಲ. ಅದು ಶೋಷಿತರಿಗೆ ಧ್ವನಿ ನೀಡಿದ…
ನಾಯಕ ಸಮುದಾಯದವರು ವಿದ್ಯಾವಂತರಾಗಿ ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಶಿಕ್ಷಣ, ಸಂಘಟನೆ ಮತ್ತು ಹೋರಾಟದಿಂದ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಮಲ್ಲೋಹಳ್ಳಿ ಗ್ರಾಮದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಹಾಕಲಾಗಿದ್ದ ಬೀಗವನ್ನು ಅಧಿಕಾರಿಗಳು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ತೆರವುಗೊಳಿಸಲಾಗಿದ್ದು,…