ಉಚಿತ ಟೈಲರಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಮಹಿಳೆಯರಿಗೆ ಟೈಲರಿಂಗ್‌ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು.

ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು 2023ರ ಫೆಬ್ರವರಿ 07 ಕೊನೆಯ ದಿನವಾಗಿದೆ.

ಆಸಕ್ತರು ತಮ್ಮ ಹೆಸರು ನೋಂದಾಯಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಖುದ್ದಾಗಿ ಭೇಟಿ ನೀಡಬಹುದು ಅಥವಾ ಕಚೇರಿ ದೂರವಾಣಿ ಸಂಖ್ಯೆ: 080-27728166 (ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 6 ಗಂಟೆ), ಮೊಬೈಲ್‌ ಸಂಖ್ಯೆ: 9113880324, 9740982585, 8884554510, 8050549412, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ಆನಂದ್‌.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

2 hours ago

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

14 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

16 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

17 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

23 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

23 hours ago