ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಮಹಿಳೆಯರಿಗೆ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು.
ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು 2023ರ ಫೆಬ್ರವರಿ 07 ಕೊನೆಯ ದಿನವಾಗಿದೆ.
ಆಸಕ್ತರು ತಮ್ಮ ಹೆಸರು ನೋಂದಾಯಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಖುದ್ದಾಗಿ ಭೇಟಿ ನೀಡಬಹುದು ಅಥವಾ ಕಚೇರಿ ದೂರವಾಣಿ ಸಂಖ್ಯೆ: 080-27728166 (ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 6 ಗಂಟೆ), ಮೊಬೈಲ್ ಸಂಖ್ಯೆ: 9113880324, 9740982585, 8884554510, 8050549412, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ಆನಂದ್.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…