ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ-ಮಹಿಳೆಯರಿಗಾಗಿ 12 ದಿನಗಳ ಕಾಲಾವಧಿಯ ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತಕರು 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರು 07-07-2025 ಸೋಮವಾರ ಸಂಸ್ಥೆಯಲ್ಲಿ ನಡೆಯುವ ತರಬೇತಿಯಲ್ಲಿ ಪಡಿತರ ಚೀಟಿ, ಆಧಾರ್ ಕಾರ್ಡ್, 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಬಹುದು.
ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತವಾಗಿ ತರಬೇತಿ, ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಭೋದನೆ ಮಾಡಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.
ಗ್ರಾಮೀಣ ಭಾಗದ ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಕೇವಲ 35 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊ. 9591514154, 8970476050, 8970446644 ಸಂಪರ್ಕಿಸಬಹುದಾಗಿದೆ.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…