ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗಾಗಿ 30 ದಿನಗಳ ಕಾಲಾವಧಿಯ ಉಚಿತ ಬ್ಯೂಟಿ ಪಾಲ೯ರ್ ಮ್ಯಾನೇಜ್ ಮೆಂಟ್ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.
ಆಸಕ್ತ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರು 27-12-2023 ಬುಧವಾರದಂದು ತರಬೇತಿ ಸಂಸ್ಥೆಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಡಿತರ ಚೀಟಿ, ಆಧಾರ್ ಕಾರ್ಡ್, 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಬಹುದು.
ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತವಾಗಿ ತರಬೇತಿ, ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಭೋದನೆ ಮಾಡಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.
ಗ್ರಾಮೀಣ ಭಾಗದ ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಕೇವಲ 35 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊ. 9591514154, 8970476050, 8970446644, 9535774621 ಸಂಪರ್ಕಿಸಬಹುದಾಗಿದೆ.
ಆಸಕ್ತರು ಗೂಗಲ್ ಫಾರ್ಮ್ ಮೂಲಕ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು. ಅದರ ಲಿಂಕ್ https://docs.google.com/forms/d/1xDvF4Tozn-HlRBRbikHKVudJGDkFPiBb2Y0jS996Cus/edit?chromeless=1
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…